ಲಂಡನ್ : ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದು ಸದ್ಯ ಗುಣಮುಖರಾಗಿರುವ ಬೋರಿಸ್ ಜಾನ್ಸನ್ ಅವರು ಚಿಕಿತ್ಸೆ ವೇಳೆ ತಾವು ಎದುರಿಸಿದ ಕಠಿಣ ಸನ್ನಿವೇಶವನ್ನು ಬಹಿರಂಗ ಪಡಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂಬ ಅರಿವಾಗಿದ್ದು ವೈದ್ಯರು ಸಾವಿನ ಘೋಷಣೆಗೆ ಸಿದ್ಧರಾಗಿದ್ದರು ಎಂಬ ವಿಷಯವನ್ನು ಅವರು ಹಂಚಿಕೊಂಡಿದ್ದಾರೆ. ಅದು ನನಗೆ ಕಠಿಣ ಕ್ಷಣಗಳಾಗಿತ್ತು. ಒಂದು ವೇಳೆ ಪರಿಸ್ಥಿತಿ ಕೈಮೀರಿ ಹೋದರೆ ಏನು ಮಾಡಬೇಕು ಎಂಬುದರ ಬಗ್ಗೆ ವೈದ್ಯರು ಸಿದ್ಧತೆಗಳನ್ನು ಮಾಡಿಕೊಂಡಿದ್ದರು ಎಂದು ದಿ ಸನ್ ಪತ್ರಿಕೆ ನೀಡಿದ ಸಂದರ್ಭದಲ್ಲಿ ತಿಳಿಸಿದ್ದಾರೆ.
ಇನ್ನು ಬ್ರಿಟನ್ ನಲ್ಲಿ 182,260 ಮಂದಿ ಕೊರೊನಾ ಸೋಂಕಿಗೆ ತುತ್ತಾಗಿದ್ದು 28,131 ಮಂದಿ ಬಲಿಯಾಗಿದ್ದಾರೆ.