ಶಿವಮೊಗ್ಗ: ನಾಯಿ ಬೊಗಳುವ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಗಲಾಟೆ ನಡೆದು, ದಂಪತಿಯು ಆಸಿಡ್ ಎರಚಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಎನ್.ಆರ್ .ಪುರ ತಾಲೂಕಿನ ಹಾಳ್ ಕರಗುಂದ ಗ್ರಾಮದಲ್ಲಿ ನಡೆದಿದೆ. ಜೇಮ್ಸ್ ಹಾಗೂ ಮರಿಯಮ್ಮ ಅವರು ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಸಾಕು ನಾಯಿ ಬೊಗಳಿದ್ದಕ್ಕೆ ಸುಂದರ್ ರಾಜ್ ಪಕ್ಕದ ಮನೆಯವರನ್ನು ಬೈಯ್ದಿದ್ದರು. ನಾಯಿ ಹೆಸರಿನಲ್ಲಿ ಜೇಮ್ಸ್, ಮರಿಯಮ್ಮಗೆ ಬೈಯ್ಯುತ್ತಿದ್ದ ಎಂಬ ಆರೋಪ ಕೇಳಿ ಬಂದಿದ್ದು, ಆಕ್ರೋಶದಿಂದ ಸುಂದರಾಜ್ ಮೇಲೆ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಸುಂದರ್ರಾಜ್ ಕಣ್ಣು, ಮುಖಕ್ಕೆ ಗಾಯಗಳಾಗಿವೆ. ಗಾಯಾಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ದಂಪತಿ ವಿರುದ್ಧ ಎನ್.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.