ತುಮಕೂರು: ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು (Car) ಪಲ್ಟಿಯಾಗಿದೆ. ಈ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ (Shira) ತಾಲೂಕಿನ ಚಿಕ್ಕನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಡೆದಿದೆ.
ಈ ಕಾರಿನಲ್ಲಿ ಕುಟುಂಬಸ್ಥರು ಬೆಂಗಳೂರಿನಿಂದ ಬಳ್ಳಾರಿಗೆ ಪ್ರಯಾಣ ಬೆಳೆಸಿದ್ದರು. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಗಾಯಾಳುಗಳನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕನ ಹಳ್ಳಿ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದರಿಂದ ಅಪಘಾತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.