ನವದೆಹಲಿ: ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್ ಆದೇಶದಂತೆ ಎಸ್ಬಿಐ ಹಂಚಿಕೊಂಡಿರುವ ಚುನಾವಣಾ ಬಾಂಡ್ಗಳ ಡೇಟಾ ಪ್ರಕಟಿಸಿದೆ.
ಮಾರ್ಚ್ 15ರ ಒಳಗಡೆ ಮಾಹಿತಿಯನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕೆಂದು ಚುನಾವಣಾ ಆಯೋಗಕ್ಕೆ ಕೋರ್ಟ್ ಸೂಚಿಸಿದ್ದರು. ಒಂದು ದಿನ ಮೊದಲೇ ಆಯೋಗವು ಈ ಕಾರ್ಯವನ್ನು ಮಾಡಿದೆ. ಚುನಾವಣಾ ಆಯೋಗ 2019ರ ಏಪ್ರಿಲ್ 12 ರಿಂದ 1 ಸಾವಿರ ರೂ. ನಿಂದ ಹಿಡಿದು 1 ಕೋಟಿ ರೂ. ಮೌಲ್ಯದ ಮುಖಬೆಲೆಯ ಚುನಾವಣಾ ಬಾಂಡ್ಗಳನ್ನು ಖರೀದಿಸಿದವರು ವಿವರ ಪ್ರಕಟಿಸಿದೆ.
ಚುನಾವಣಾ ಬಾಂಡ್ಗಳ ಮೂಲಕ ಹಣವನ್ನು ಸ್ವೀಕರಿಸುವವರಲ್ಲಿ ಬಿಜೆಪಿ, ಕಾಂಗ್ರೆಸ್, ಎಐಎಡಿಎಂಕೆ, ಬಿಆರ್ಎಸ್, ಶಿವಸೇನೆ, ಟಿಡಿಪಿ, ವೈಎಸ್ಆರ್ ಕಾಂಗ್ರೆಸ್ ಮತ್ತು ಇತರ ರಾಜಕೀಯ ಪಕ್ಷಗಳು ಸೇರಿವೆ ಎಂದು ಹೇಳಲಾಗಿದೆ.