ಮೊದಲ ಪೋಸ್ಟಿಂಗ್ ನಲ್ಲಿಯೇ ಲಂಚ ಪಡೆಯುತ್ತಿದ್ದ ಜಾರ್ಖಂಡ್ನ (Jharkhand) ಸಹಕಾರಿ ಇಲಾಖೆಯ ಮಹಿಳಾ ಅಧಿಕಾರಿ (Women Officer) ಬಲೆಗೆ ಬಿದ್ದಿದ್ದಾರೆ.
ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಈ ಅಧಿಕಾರಿ 8 ತಿಂಗಳ ಹಿಂದೆ ಕೊಡೆರ್ಮಾದಲ್ಲಿ ಸಹಾಯಕ ರಿಜಿಸ್ಟ್ರಾರ್ ಆಗಿ ಮೊದಲ ಪೋಸ್ಟಿಂಗ್ ಹಾಕಿಸಿಕೊಂಡಿದ್ದರು. ಕೋಡೆರ್ಮಾ ವ್ಯಾಪಾರ ಸಹಕಾರ ಸಮಿತಿಯಿಂದ ಮಹಿಳಾ ಅಧಿಕಾರಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟು, 10 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದಾಗ ಎಸಿಬಿ ತಂಡ ಬಂಧಿಸಿದೆ.
ಲಂಚ ಕೇಳಿದ ಹಿನ್ನೆಲೆಯಲ್ಲಿ ಸಮಿತಿಯ ಸದಸ್ಯ ರಾಮೇಶ್ವರ ಪ್ರಸಾದ್ ಯಾದವ್, ಎಸಿಬಿ ಡಿಜಿಗೆ ದೂರು ನೀಡಿದ್ದರು. ಎಸಿಬಿ ದೂರನ್ನು ಪರಿಶೀಲಿಸಿ ಆಕೆಯನ್ನು ರೆಡ್ಹ್ಯಾಂಡ್ ಆಗಿ ಹಿಡಿಯಲು ಬಲೆ ಬೀಸಲಾಗಿತ್ತು. ಲಂಚ ತೆಗೆದುಕೊಳ್ಳುತ್ತಿರುವ ವೀಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂದಿನ ಕ್ರಮಕ್ಕಾಗಿ ಎಸಿಬಿ ತಂಡ ಆಕೆಯನ್ನು ಹಜಾರಿಬಾಗ್ಗೆ ಕರೆದೊಯ್ದಿದೆ. ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದೆ. ಲಂಚ ಸ್ವೀಕರಿಸುತ್ತಿದ್ದ ವೇಳೆ ಶರ್ಮಾ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಎಸಿಬಿ ಅಧಿಕಾರಿ ಹೇಳಿದ್ದಾರೆ.