ಮೂವರು ಭಯೋತ್ಪಾದಕರ ಎನ್ಕೌಂಟರ್ Saaksha Tv
ಶ್ರೀನಗರ: ನಿನ್ನೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ)ನ ಮೂವರು ಭಯೋತ್ಪಾದಕರನ್ನು ಎನ್ಕೌಂಟರ್ ಮಾಡಲಾಗಿದೆ. ಉಗ್ರರಿಂದ 3 ಎಕೆ-56 ರೈಫಲ್ಗಳು, 8 ಮ್ಯಾಗಜೀನ್ಗಳು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. 2022ರಲ್ಲಿ ಇಲ್ಲಿಯವರೆಗೆ ಒಟ್ಟು 11 ಉಗ್ರರನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ವಿಜಯ್ ಕುಮಾರ್ ಕಾಶ್ಮೀರ ಐಜಿಪಿ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಝೋಲ್ವಾ ಕ್ರಾಲ್ಪೋರಾ ಚದೂರ ಪ್ರದೇಶದಲ್ಲಿ ಗುರುವಾರ ಸಂಜೆ (ಜನವರಿ 6) ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. “ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತ್ಯೆಗೀಡಾದ ಮೂವರು ಭಯೋತ್ಪಾದಕರ ಪೈಕಿ ಓರ್ವನನ್ನು ಶ್ರೀನಗರದ ವಸೀಂ ಎಂದು ಐಜಿಪಿ ತಿಳಿಸಿದ್ದಾರೆ.