ಫೈನಲ್ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟ
ಮ್ಯಾಂಚೆಸ್ಟರ್ : ಭಾರತದ ವಿರುದ್ಧದ ಐದನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ ಪ್ರಕಟಗೊಂಡಿದ್ದು, ಪಂದ್ಯವನ್ನು ಗೆದ್ದೇ ಗೆಲ್ಲುವ ಪ್ಲಾನ್ ನೊಂದಿಗೆ ಇಬ್ಬರು ಹಿರಿಯ ಆಟಗಾರರಿಗೆ ಮಣೆ ಹಾಕಿದೆ.
ಭಾರತದ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ 1-2 ಅಂತರದ ಹಿನ್ನಡೆಯಲ್ಲಿದೆ. ಹೀಗಾಗಿ ಮುಂದಿನ ಪಂದ್ಯವನ್ನು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿ ಇಂಗ್ಲೆಂಡ್ ತಂಡವಿದೆ.
ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿರುವ ಇಂಗ್ಲೆಂಡ್ ತಂಡ, ಹಿರಿಯ ಆಟಗಾರರಾದ ಜೋಸ್ ಬಟ್ಲರ್, ಸ್ಪಿನ್ನರ್ ಜ್ಯಾಕ್ ಲೀಚ್ ಗೆ ಅವಕಾಶ ಕೊಟ್ಟಿದ್ದಾರೆ.
ಇನ್ನು ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 10ರಿಂದ ಮ್ಯಾಂಚೆಸ್ಟರ್ ನಲ್ಲಿ ಆರಂಭಗೊಳ್ಳಲಿದೆ.
ತಂಡ ಹೀಗಿದೆ..
ಜೋ ರೂಟ್ (ಕ್ಯಾಪ್ಟನ್ ), ಮೊಯಿನ್ ಅಲಿ, ಜೆಮ್ಸ್ ಆಂಡರ್ಸನ್, ಬೈರ್ ಸ್ಟೋ, ರೋರಿ ಬನ್ರ್ಸ್, ಜೋಶ್ ಬಟ್ಲರ್, ಸ್ಯಾಮ್ ಕರ್ರನ್, ಹಸೀಬ್ ಹಮೀದ್, ಜ್ಯಾಕ್ ಲೀಚ್, ಡೇವಿಡ್ ಮಲನ್, ಓವರ್ ಟೊನ್, ಒಲಿ ಪೋಪ್, ರಾಬಿನ್ಸನ್, ಕ್ರಿಸ್ ವೋಕ್ಸ್ ಹಾಗು ಮಾರ್ಕ್ ವುಡ್.