ತಮಿಳಿನ ಖ್ಯಾತ ಸಂಗೀತ ನಿರ್ದೇಶಕ (music director) ವಿಜಯ್ ಆನಂದ್ (Vijay Anand) ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ವಿಜಯ್ ಆನಂದ್ ಅವರು ಹಲವಾರು ದಿನಗಳಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಹಲೋಕ ತ್ಯಜಿಸಿದ್ದಾರೆ (Passed away). ವಿಜಯ್ ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.
ವಿಜಯ್ 1982ರಲ್ಲಿಯೇ ವೃತ್ತಿ ಜೀವನ ಆರಂಭಿಸಿದ್ದರು. ರಜನಿಕಾಂತ್ ನಟನೆಯ ನಾನ್ ಆದಿಮೈ ಇಲೈ ಸೇರಿದಂತೆ ನೂರಕ್ಕೂ ಅಧಿಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿರುವ ವಿಜಯ್, ತಮಿಳು, ತೆಲುಗು ಹಾಗೂ ಮಲಯಾಳಂ ಸಿನಿಮಾ ರಂಗದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅನೇಕ ಸ್ಟಾರ್ ನಟರ ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿರುವ ಹೆಗ್ಗಳಿಕೆ ಕೂಡ ಅವರದ್ದಾಗಿದೆ. ಬರೋಬ್ಬರಿ ನಾಲ್ಕು ದಶಕಗಳ ಕಾಲ ಸಂಗೀತ ಕ್ಷೇತ್ರದಲ್ಲಿ ಅವರು ಕೆಲಸ ಮಾಡಿದ್ದಾರೆ. ಸದ್ಯ ವಿಜಯ್ ಅವರ ನಿಧನಕ್ಕೆ ಇಡೀ ಚಿತ್ರ ರಂಗ ಕಂಬನಿ ಮಿಡಿಯುತ್ತಿದೆ.