ಲಕ್ನೋ: ವ್ಯಕ್ತಿಯೊಬ್ಬ ಟಿವಿ ಆಫ್ ಮಾಡಿದ್ದಕ್ಕೆ ತಮ್ಮ ಪುತ್ರನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ (Kanpur Uttarpradesh) ನಡೆದಿದೆ. ಮೃತ ದುರ್ದೈವಿ ಪುತ್ರನನ್ನು ದೀಪಕ್ ನಿಶಾದ್ ಹಾಗೂ ಆರೋಪಿ ತಂದೆಯನ್ನು ಗಣೇಶ್ ಪ್ರಸಾದ್ ಎನ್ನಲಾಗಿದೆ. ಆಸ್ಟ್ರೇಲಿಯಾ ಹಾಗೂ ಟೀಂ ಇಂಡಿಯಾ (Australia- Team India) ನಡುವೆ ಫೈನಲ್ ಕ್ರಿಕೆಟ್ ಮ್ಯಾಚ್ ಇತ್ತು. ಈ ಪಂದ್ಯವನ್ನು ಗಣೇಶ್ ಪ್ರಸಾದ್ ನೋಡುತ್ತಿದ್ದರು. ಆಗ ಮಗ ಟಿವಿ ಬಂದ್ ಮಾಡಿದ್ದಾನೆ. ಇದರಿಂದ ಸಿಟ್ಟಾಗಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಟಿವಿ ನೋಡುತ್ತಿದ್ದ ತಂದೆಗೆ ಮಗ ಅಡುಗೆ ಮಾಡುವಂತೆ ಹೇಳಿದ್ದಾನೆ. ಆದರೆ ಗಣೇಶ್ ಮಗನ ಮಾತಿಗೆ ಒಪ್ಪಿಲ್ಲ. ಹೀಗಾಗಿ ತಂದೆಯ ಗಮನ ಬೇರೆಡೆ ಸೆಳೆಯುವುದಕ್ಕಾಗಿ ಮಗ ಟಿವಿ ಆಫ್ ಮಾಡಿದ್ದಾನೆ. ಆಗ ಇಬ್ಬರ ಮಧ್ಯೆ ವಾಗ್ವಾದ ಉಂಟಾಗಿದೆ. ವಾಗ್ವಾದ ಜೋರಾಗಿ ತಂದೆ ಎಲೆಕ್ಟ್ರಿಕ್ ಕೇಬಲ್ ವೈರ್ ತೆಗೆದುಕೊಂಡು ಮಗನ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.