ಬೆಂಗಳೂರು: ಮಗನಿಗೆ ಗುಂಡು ಹಾರಿಸಿ ತಂದೆಯೇ ಕೊಲೆ ಮಾಡಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.
ಈ ಘಟನೆ ಸಿಲಿಕಾನ್ ಸಿಟಿಯ (Bengaluru) ಕರೆಕಲ್ ನಲ್ಲಿ ನಡೆದಿದೆ. ನರ್ತನ್ ಬೋಪಣ್ಣ (32) ಕೊಲೆಯಾಗಿರುವ ವ್ಯಕ್ತಿ ಎನ್ನಲಾಗಿದೆ.
ತಂದೆ ಸುರೇಶ್ ಗುಂಡು ಹಾರಿಸಿ ಕೊಲೆ ಮಾಡಿರುವ ವ್ಯಕ್ತಿ. ಗುಂಡೇಟು ಬೀಳುತ್ತಿದ್ದಂತೆ ಕೂಡಲೇ ನರ್ತನ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಆದರೆ, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.