ಬ್ರಿಸ್ಬೇನ್: ಭಾರತ (Team India) ಮತ್ತು ಆಸ್ಟ್ರೇಲಿಯಾ (Australia) ಮಧ್ಯೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಮಳೆಗೆ ಆಹುತಿಯಾಗಿದೆ.
ಟಾಸ್ ಗೆದ್ದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (Rohith Sharma) ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದರು. ಅದರಂತೆ ಬ್ಯಾಟಿಂಗ್ ನಡೆಸಿದ್ದ ಆಸ್ಟ್ರೇಲಿಯಾ 13.2 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 28 ರನ್ ಗಳಿಸಿದೆ. ಆರಂಭಿಕ ಆಟಗಾರರಾದ ಉಸ್ಮಾನ್ ಖ್ವಾಜಾ 19 ರನ್ ನೇಥನ್ ಮೆಕ್‌ಸ್ವೀನಿ 4 ಕ್ರೀಸ್ ನಲ್ಲಿದ್ದರು. ಆದರೆ, ಈ ವೇಳೆ ಮಳೆ ಆರಂಭವಾಯಿತು. ಸತತ ಮಳೆಯಿಂದಾಗಿ ಟೀ ವಿರಾಮದ ಬಳಿ ಮೊದಲ ದಿನದಾಟವನ್ನು ರದ್ದುಗೊಳಿಸಲು ನಿರ್ಧರಿಸಲಾಯಿತು.
ಭಾರತೀಯ ಕ್ರಿಕೆಟ್ ತಂಡದಲ್ಲಿ ಹರ್ಷೀತ್ ರಾಣಾ ಮತ್ತು ರವಿಚಂದ್ರನ್ ಅಶ್ವಿನ್ ಜಾಗದಲ್ಲಿ ಆಕಾಶ್ ದೀಪ್ ಮತ್ತು ರವೀಂದ್ರ ಜಡೇಜಾ ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ಟೂರ್ನಿಯು 1-1ರಲ್ಲಿ ಸಮಬಲ ಸಾಧಿಸಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಫೈನಲ್ ಪಂದ್ಯ ಆಡಲು ಎರಡೂ ತಂಡಗಳಿಗೆ ಈ ಸರಣಿ ಮುಖ್ಯವಾಗಿದೆ.