ಮೈಸೂರಿನಲ್ಲಿ ಮೊಟ್ಟ ಮೊದಲ ಒಮಿಕ್ರಾನ್ ಸೋಂಕು ಪತ್ತೆ….
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಸ್ವಿಡ್ಜರ್ಲ್ಯಾಂಡ್ ನಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದ್ದು, ಸೋಂಕು ಪತ್ತೆಯಾಗಿರುವ ಬಗ್ಗೆ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೈಸೂರಿನಲ್ಲಿ ಮೊದಲ ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಬಾಲಕಿಗೆ ಯಾವುದೇ ರೀತಿ ರೋಗ ಲಕ್ಷಣಗಳಿರಲ್ಲ. ಸದ್ಯ ಬಾಲಕಿಯನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕಿಯ ಪ್ರಾಥಮಿಕ ಸಂಪರ್ಕಿತರಿಗೆ ಕರೋನಾ ಪರೀಕ್ಷೆ ಮಾಡಲಾಗುತ್ತಿದೆ.
ಈ ಮೂಲಕ ಕರ್ನಾಟಕದಲ್ಲಿ ಒಮಿಕ್ರಾನ್ ಸೋಂಕಿತರ ಸಂಖೆ 20ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 254 ಪ್ರಕರಣಗಳು ವರದಿಯಾಗಿದೆ.
ದೇಶದಲ್ಲಿ ಒಮಿಕ್ರಾನ್‌ನ ಸೋಂಕುಗಳ ಸಂಖ್ಯೆ 254 ಕ್ಕೆ ಏರಿಕೆ….
ಇಂದು ಕರೋನಾ ಕುರಿತು ಉನ್ನತ ಮಟ್ಟದ ಸಭೆ ನಡೆಸಲಿರುವ ಮೋದಿ…








