ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ನಂತರ ಇದೇ ಮೊದಲ ಬಾರಿಗೆ ರಾಮ ನವಮಿ ಆಚರಿಸಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ವಿಶೇಷವಾಗಿ ಶುಭಕೋರಿದ್ದಾರೆ. ಈ ವರ್ಷದ ಆರಂಭದಲ್ಲಿ ರಾಮ ಮಂದಿರ ಉದ್ಘಾಟನೆ ನೆರವೇರಿಸಲಾಯಿತು ಬಳಿಕ ಈಗ ಮೊದಲ ರಾಮನವಮಿ ಆಚರಣೆ ಮಾಡಲಾಗುತ್ತಿದೆ. ಐದು ಶತಮಾನಗಳ ಕಾಯುವಿಕೆಯ ನಂತರ ಇಂದು ಅಯೋಧ್ಯೆಯಲ್ಲಿ ಈ ರೀತಿ ರಾಮನವಮಿಯನ್ನು ಆಚರಿಸುವ ಸೌಭಾಗ್ಯ ನಮಗೆ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಅಸಂಖ್ಯಾತ ರಾಮನ ಭಕ್ತರು ಮತ್ತು ರಾಮ ಮಂದಿರ ನಿರ್ಮಾಣಕ್ಕಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟ ಸಂತರನ್ನು ನೆನಪಿಸಿಕೊಳ್ಳುವ ಮತ್ತು ಗೌರವ ಸಲ್ಲಿಸುವ ಸಂದರ್ಭವೂ ಆಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಶ್ರೀರಾಮನು ದೇಶದ ಜನರ ಮನದಲ್ಲಿ ನೆಲೆ ನಿಂತಿದ್ದಾನೆ. ಹೀಗಾಗಿ ಪ್ರತಿಯೊಬ್ಬರೂ ಖುಷಿಯಿಂದ ರಾಮನವಮಿಯಲ್ಲಿ ಭಾಗವಹಿಸುತ್ತಿದ್ದಾರೆ. ಮಂದಿರದಲ್ಲಿ ವಿವಿಧ ಖಾದ್ಯಗಳನ್ನು ರಾಮನಿಗಾಗಿ ಸಿದ್ಧಪಡಿಸಲಾಗಿದೆ. ದೇಶವಾಸಿಗಳು ಕೂಡ ಮನೆಯಲ್ಲಿ ವಿಶೇಷ ಪೂಜಾ ಕೈಂಕರ್ಯ ಕೈಗೊಂಡಿದ್ದಾರೆ.