ನವದೆಹಲಿ: ಬಾರತದಲ್ಲಿ ವಿಶ್ವಕಪ್ ನಡೆಯುತ್ತಿರುವ ಸಂದರ್ಭದಲ್ಲಿಯೇ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ನಿಧನರಾಗಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಬಿಶನ್ ಸಿಂಗ್ ಬೇಡಿ (Bishan Singh Bedi) ಅಸುನೀಗಿದ್ದಾರೆ. ಸ್ಪಿನ್ನರ್ ಆಗಿದ್ದ ಬಿಶನ್ ಸಿಂಗ್ ಬೇಡಿ (77) 1967 ಮತ್ತು 1979ರ ನಡುವೆ 67 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಇವರು 266 ವಿಕೆಟ್ ಪಡೆದ ಸಾಧನೆ ಮಾಡಿದ್ದರು. 12 ವರ್ಷಗಳ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ 10 ಅಂತಾರಾಷ್ಟ್ರೀಯ ಏಕದಿನ ಪಂದ್ಯವಾಡಿರುವ ಇವರು 7 ವಿಕೆಟ್ ಪಡೆದಿದ್ದರು.
ಬೇಡಿ ಆಡುತ್ತಿದ್ದ ಸಂದರ್ಭದಲ್ಲಿ ಭಾರತದ ಮೊದಲ ಏಕದಿನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು 370 ಪ್ರಥಮ ದರ್ಜೆ ಪಂದ್ಯಗಳಲ್ಲಿ 1,560 ವಿಕೆಟ್ ಪಡೆದಿದ್ದರು. ಇವರು ದೇಶೀಯ ಲೀಗ್ ನಲ್ಲಿ ದೆಹಲಿ ಪರ ಬೌಲಿಂಗ್ ಮಾಡುತ್ತಿದ್ದರು. ಗಾಯಗೊಂಡಿದ್ದ ಅಜಿತ್ ವಾಡೇಕರ್ ಅನುಪಸ್ಥಿತಿಯಲ್ಲಿ ತಂಡದ ನಾಯಕತ್ವ ವಹಿಸಿದ್ದಾಗ ಇಂಗ್ಲೆಂಡ್ (England) ವಿರುದ್ಧದ 1971 ರ ಭಾರತ ಐತಿಹಾಸಿಕ ಸರಣಿ ಜಯಿಸಿತ್ತು.