ಬೆಂಗಳೂರು: ರಾಜ್ಯದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ (83)(B.K. Bhattacharya) ನಿಧನರಾಗಿದ್ದಾರೆ.
ಭಟ್ಟಾಚಾರ್ಯ ಅವರು ಹಲವು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಹಣಕಾಸು ಸಚಿವರಾಗಿದ್ದಾಗ ಅವರೊಂದಿಗೆ ಕಾರ್ಯದರ್ಶಿಯಾಗಿ ಇವರು ಕಾರ್ಯ ನಿರ್ವಹಿಸಿದ್ದರು.
ಭಟ್ಟಾಚಾರ್ಯ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ. ಐಎಎಸ್ ಅಧಿಕಾರಿಗಳ ಸಂಘದ ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಬಿ.ಕೆ. ಭಟ್ಟಾಚಾರ್ಯ ಅವರು 2000ನೇ ಇಸ್ವಿಯ ಡಿಸೆಂಬರ್ 30ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ನಿವೃತ್ತಿ ಹೊಂದಿದ್ದರು.