Bengaluru: ನಾಲ್ಕನೇ ಅಲೆ ಬಂದಿಲ್ಲ. ಪ್ರಕರಣ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

1 min read
D. K Sudakar Saaksha Tv

ನಾಲ್ಕನೇ ಅಲೆ ಬಂದಿಲ್ಲ. ಪ್ರಕರಣ ಹೆಚ್ಚುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮ ಅಗತ್ಯ: ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಕಳೆದೊಂದು ವಾರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದನ್ನು ಗಮನಿಸಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಲಾಗುತ್ತಿದೆ. ಜೊತೆಗೆ ಆರೋಗ್ಯ ಇಲಾಖೆಯ ಸಭೆ ನಡೆಸಿ ಕ್ರಮ ವಹಿಸಲಾಗುವುದು. ಜನರ ಸುರಕ್ಷತಾ ದೃಷ್ಟಿಯಿಂದ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ಮೂರನೇ ಡೋಸ್ ಪಡೆಯಲು ಸೂಚಿಸಲಾಗಿದೆ. ಆದರೆ ಇದನ್ನು ಹೆಚ್ಚಿನವರು ಪಾಲಿಸುತ್ತಿಲ್ಲ. ಇನ್ನೂ 29-30 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ ಎಂದರು.

K Sudakar Saaksha Tv

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದೆ. ಆದರೂ ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 97.9% ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಅನ್ನು ಪಡೆದವರ ಪ್ರಮಾಣ 100% ದಾಟಿದೆ. 12 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನವರಿಗೆ ಲಸಿಕೆ ಕೊಡಿಸಬೇಕಿದೆ. ಪೋಷಕರು ಈ ಬಗ್ಗೆ ಗಮನ ನೀಡಬೇಕು ಎಂದರು.

ಭ್ರಷ್ಟಾಚಾರ ಹುಟ್ಟುಹಾಕಿದ ಪಕ್ಷ ಕಾಂಗ್ರೆಸ್: 25 ವರ್ಷ ಮೇಲ್ಪಟ್ಟವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇದು ಸಂವಿಧಾನ ನೀಡಿರುವ ಅವಕಾಶವಿದೆ. ಅದೇ ಆಧಾರದಲ್ಲಿ ಸ್ವಾಮೀಜಿಗಳು ಕೂಡ ಸ್ಪರ್ಧೆ ಮಾಡಬಹುದು. ಕಾಂಗ್ರೆಸ್ ಪಕ್ಷವು ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಕ್ಷವಾಗಿದೆ. ಕಾಂಗ್ರೆಸ್ಸಿಗರು ಇದೇ ಭ್ರಷ್ಟಾಚಾರದ ಆರೋಪವನ್ನು ಮಾಡಿ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ವಿಫಲರಾದಂತೆಯೇ ಕರ್ನಾಟಕದಲ್ಲೂ ಅವರು ವಿಫಲರಾಗುವುದು ಖಚಿತ ಎಂದರು.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd