ವೃದ್ಧೆಯ ಅಂತ್ಯಸಂಸ್ಕಾರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ರವಾನೆಯಾಗಿದ್ದ ಕಾರಣ ಪಚ್ಚನಾಡಿ ಸ್ಮಶಾನದಲ್ಲಿ ಬಹಳಷ್ಟು ಸ್ಥಳೀಯರು ಸೇರಿದ್ದರು. ಕಾನೂನು ತೊಡಕು ಉಂಟಾಗಬಾರದೆಂಬ ಕಾರಣಕ್ಕೆ ಜನರನ್ನು ಸಮಾಧಾನಿಸಿ ಸೂಕ್ತ ಮಾಹಿತಿ ನೀಡಲು ಸ್ಥಳಕ್ಕೆ ತೆರಳಿದ್ದೇನೆ ಹೊರತಾಗಿ ಅಂತ್ಯಸಂಸ್ಕಾರವನ್ನು ತಡೆಯುವ ಉದ್ದೇಶದಿಂದ ಅಲ್ಲ ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ. ತಮ್ಮ ಕುರಿತು ಹರಡುತ್ತಿರುವ ಅಪಪ್ರಚಾರಕ್ಕೆ ಸ್ಪಷ್ಟನೆ ನೀಡಿದ್ದಾರೆ.
ಜಿಲ್ಲಾಡಳಿತವು ಮೊದಲೇ ವೃದ್ದೆಯ ಮೃತದೇಹನ್ನು ಪಚ್ಚನಾಡಿ ಸ್ಮಶಾನದಲ್ಲಿ ಕೊಂಡೊಯ್ದು ಇಡಲಾಗಿತ್ತು ಎಂಬ ತಪ್ಪಾದ ಮಾಹಿತಿಯು ಹರಡಿದ ಕಾರಣ ಬಹಳಷ್ಟು ಸ್ಥಳೀಯರು ಪಚ್ಚನಾಡಿ ಸ್ಮಶಾನದ ಬಳಿ ಸೇರಿದ್ದರು. ಪರಿಸ್ಥಿತಿ ಕೈ ಮೀರಿದರೆ ಸಮಸ್ಯೆ ಎದುರಾಗಬಹುದೆಂಬ ಹಿನ್ನೆಲೆಯಲ್ಲಿ ಸ್ಥಳ ಬದಲಿಸಲಾಯಿತು ಎಂದು ತಿಳಿಸಿದರು.
ಕೊರೊನಾ ಸೋಂಕಿತರನ್ನು ಚಿತೆಯಲ್ಲಿ ದಹಿಸುವುದರಿಂದ ಸೋಂಕು ಹರಡುವುದಿಲ್ಲ. ವೈದ್ಯನಾಗಿ ನನಗೆ ಈ ವಿಚಾರದ ಬಗೆ ಮಾಹಿತಿ ಇದೆ. ಈ ಬಗ್ಗೆ ತಜ್ಞರು ಕೂಡ ಹೇಳಿದ್ದಾರೆ. ಹೀಗಾಗಿ ನಾನು ವೃದ್ಧೆಯ ಅಂತ್ಯಸಂಸ್ಕಾರವನ್ನು ವಿರೋಧಿಸಿಲ್ಲ . ಆ ಬಗ್ಗೆ ವೈದ್ಯನಾಗಿಯೂ ಕೂಡ ನಾನು ಯೋಚಿಸಲು ಸಾಧ್ಯವಿಲ್ಲ. ಜನರಿಗೆ ಸೋಂಕಿತರ ಅಂತ್ಯಸಂಸ್ಕಾರದಿಂದ ಪರಿಸರದಲ್ಲಿ ಯಾವ ದುಷ್ಪರಿಣಾಮ ಆಗುವುದಿಲ್ಲ ಎಂಬ ಬಗ್ಗೆ ಸೂಕ್ತ ಮಾಹಿತಿ ನೀಡಬೇಕಿದೆ. ಜಿಲ್ಲಾಡಳಿತ ಮುಂದೆ ಈ ರೀತಿ ಆಗದಂತೆ ಸರಿಯಾದ ಕ್ರಮ ತೆಗೆದುಕೊಳ್ಳಲಿದೆ.
ಕೊರೊನಾ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಅವರ ಇಡೀ ಕುಟುಂಬವೇ ದೂರವಿದ್ದು, ಬರಲಾಗದೇ ಸಂಕಟ ಪಡುತ್ತಿರುವಾಗ ಭಾವನಾತ್ಮಕವಾಗಿ ಯೋಚನೆ ಮಾಡುವುದರೊಂದಿಗೆ ಮಾನವೀಯತೆಯಿಂದ ಬೆಂಬಲ ನೀಡುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿ. ಈ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ರಾಜಕೀಯ ಮಾಡಲು ಬಯಸುವುದಿಲ್ಲ ಎಂದು ಅವರು ಹೇಳಿದರು.
ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!
ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....








