ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ತೋಟಕ್ಕೆ ತೆರಳಿದ್ದ ಯುವತಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾಳೆ. ಇಂತಹದೊಂದು ದಾರುಣ ಘಟನೆ ಚಿಕ್ಕಬಳ್ಳಾಪುರದ ನಂದಿ ಠಾಣೆ ವ್ಯಾಪ್ತಿಯ ಬಂಡಹಳ್ಳಿ ಸಮೀಪ ನಡೆದಿದೆ. ತೋಟಕ್ಕೆ ಹೋಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ವರ್ಷ ಮೃತಪಟ್ಟಿದ್ದಾಳೆ. ಘಟನೆಯ ಬಳಿಕ ಲಾರಿ ಚಾಲಕ ಸ್ಥಳದಲ್ಲಿಯೇ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಮುದ್ದೇನಹಳ್ಳಿ ಕಡೆಗೆ ಹೊರಟಿದ್ದ ಟಿಪ್ಪರ್ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ವಲ್ಪ ದೂರ ದ್ವಿಚಕ್ರ ವಾಹನವನ್ನು ಎಳೆದುಕೊಂಡು ಹೋಗಿದೆ. ಈ ವೇಳೆ ವರ್ಷ ತೀವ್ರವಾಗಿ ಗಾಯಗೊಂಡಿದ್ದು , ಆಕೆಯನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲೇ ಪ್ರಾಣ ಬಿಟ್ಟಿದ್ದಾಳೆ. ಈ ಸಂಬಂಧ ನಂದಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಮನಗರಿಯಲ್ಲೇ ಫೈಸಲಾ ಆಗಲಿ ಧಮ್ ಇದ್ದರೆ ಚುನಾವಣೆಗೆ ನಿಲ್ಲಿ ಎಂದು ಅಖಿಲೇಶ್ ಗೆ ಯೋಗಿ ಆದಿತ್ಯನಾಥ್ ಓಪನ್ ಚಾಲೆಂಜ್
ಉತ್ತರ ಪ್ರದೇಶದ ರಾಜಕೀಯ ರಣಕಣದಲ್ಲಿ ಈಗ ಅಯೋಧ್ಯೆಯ ಕಿಚ್ಚು ಹತ್ತಿಕೊಂಡಿದೆ. ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಟೀಕೆಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅತ್ಯಂತ...








