ಕಲಬುರಗಿ: ಶಾಲೆಯಲ್ಲಿನ ಬಿಸಿಯೂಟದ ಸಾಂಬಾರ್ ಪಾತ್ರೆಗೆ (Sambar Pot) ಬಿದ್ದಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದಾಳೆ.
ಜಿಲ್ಲೆಯ ಅಫಜಲಪುರ ತಾಲೂಕಿನ ಚಿಣಮಗೇರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡನೇ ತರಗತಿ ಬಾಲಕಿ ಸಾಂಬಾರ್ ಪಾತ್ರೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಬಾಲಕಿ ಮಹಾಂತಮ್ಮಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ವಿದ್ಯಾರ್ಥಿನಿಯು ಸಾಂಬಾರ್ ಪಾತ್ರೆಗೆ ಬಿದ್ದ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಳು. ಕೂಡಲೇ ಬಾಲಕಿಯನ್ನು ಜಿಲ್ಲೆಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುಣಮುಖವಾಗದ ಹಿನ್ನೆಲೆಯಲ್ಲಿ ಬಾಲಕಿಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಹಲವರನ್ನು ಅಮಾನತು ಮಾಡಲಾಗಿದೆ.