ಆನೇಕಲ್: ಬಾಲ್ಯ ವಿವಾಹಕ್ಕೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ.
ಬಾಲಕಿ ವಿವಾಹವಾಗಿದ್ದ ಬಿಹಾರ ಮೂಲದ ವಿಶಾಲ್ ಕುಮಾರ್ ಸಹಾನಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನೀಲಂ ಕುಮಾರಿಯನ್ನು 2023ರ ಫೆಬ್ರವರಿ ತಿಂಗಳಲ್ಲಿ ಬಿಹಾರದಲ್ಲಿ ವಿಶಾಲ್ ಕುಮಾರ್ ಸಹಾನಿ ಬಾಲ್ಯವಿವಾಹವಾಗಿದ್ದ. 1 ವರ್ಷದ ಹಿಂದೆ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದು, ಯಶವಂತಪುರದಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
20 ದಿನಗಳ ಹಿಂದೆ ಬಿಹಾರದಿಂದ ಬಾಲಕಿಯನ್ನು ಕರೆತಂದಿದ್ದ. ಹೆಬ್ಬಗೋಡಿ ಸಮೀಪದ ತಿರುಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಬಾಲ್ಯವಿವಾಹವಾಗಿ ಲೈಂಗಿಕವಾಗಿ ಬಳಸಿಕೊಂಡು ಮಾನಸಿಕ ಹಿಂಸೆ ಹಿನ್ನೆಲೆ ಮಾ.13ರಂದು ಮನೆಯಲ್ಲಿ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.