ಮುಂಬಯಿ: ಟೋಕಿಯೊ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿರುವ ನೀರಜ್ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನೀರಜ್ ಚೋಪ್ರಾ ಸದ್ದಿಲ್ಲದೇ ಮದುವೆಯಾಗಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಭಾರತದ ಚಿನ್ನದ ಹುಡುಗ ನೀರಜ್ ಚೋಪ್ರಾ, ಹಿಮಾನಿ ಮೋರ್ ಅವರನ್ನು ವಿವಾಹವಾಗಿದ್ದಾರೆ. ಮದುವೆಯ ಫೋಟೋಗಳನ್ನು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿರುವ ಚೋಪ್ರಾ, ʻನನ್ನ ಕುಟುಂಬದೊಂದಿಗೆ ಜೀವನದ ಹೊಸ ಅಧ್ಯಾಯ ಪ್ರಾರಂಭಿಸಿದೆ. ಈ ಕ್ಷಣದಲ್ಲಿ ಪ್ರತಿಯೊಬ್ಬರ ಆಶೀರ್ವಾದಕ್ಕೂ ಕೃತಜ್ಞನಾಗಿದ್ದೇನೆʼ ಎಂದು ತಾವೇ ಬರೆದುಕೊಂಡಿದ್ದಾರೆ.
ನೀರಜ್ ಚೋಪ್ರಾ ಹಂಚಿಕೊಂಡಿರುವ ಫೋಟೋದಲ್ಲಿ ಎರಡೂ ಕುಟುಂಬಗಳ ಪ್ರಮುಖರು ಕಾಣಿಸಿಕೊಂಡಿದ್ದಾರೆ. ರಹಸ್ಯವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅಲ್ಲದೇ, 2 ದಿನಗಳ ಹಿಂದೆಯೇ ನಡೆದಿದೆ. ನವ ದಂಪತಿಗಳು ಹನಿಮೂನ್‌ಗೆ ತೆರಳಿದ್ದಾರೆ. ಎಲ್ಲಿಗೆ ಹೋಗಿದ್ದಾರೆ ಎಂಬುದು ಮಾತ್ರ ಯಾರಿಗೂ ಗೊತ್ತಿಲ್ಲ.
ನೀರಜ್ ಚೋಪ್ರಾ ಪತ್ನಿ ಹಿಮಾನಿ ಮೋರ್ ಸೋನಿಪತ್ ಮೂಲದವರು. ಟೆನ್ನಿಸ್ ಆಟಗಾರ್ತಿ ಆಗಿದ್ದಾರೆ.








