ಬೆಂಗಳೂರು : ಉಪ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿದ್ದ ನಟಿ ರಾಗಿಣಿ ದ್ವಿವೇದಿ ಇಂದು ಬೆಳ್ಳಂಬೆಳಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ” ತಮಗೆ ಸರ್ಕಾರದಲ್ಲಿ ಅಥವಾ ಪಕ್ಷದಲ್ಲಿ ಸ್ಥಾನಮಾನ ನೀಡುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಮುಂಜಾನೆ ಸಿಎಂ ಅವರ ಖಾಸಗಿ ನಿವಾಸ ಕಾವೇರಿಗೆ ಭೇಟಿ ನೀಡಿದ ನಟಿ ರಾಗಿಣಿ, ನನಗೆ ಸರ್ಕಾರದಲ್ಲಿ ಅಥವಾ ಪಕ್ಷದಲ್ಲಿ ಒಂದು ಸ್ಥಾನ ಬೇಕೇ ಬೇಕು. ನಾನು ಕೂಡ ಉಪ-ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದೇನೆ. ಈಗ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ನನ್ನನ್ನು ಪರಿಗಣಿಸಿ ಎಂದು ಸಿಎಂ ಬಳಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಮಾತ್ರವಲ್ಲದೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರಂತೆ.








