ಹೈದರಾಬಾದ್: ಊಟದ ಮೆನುವಿನಲ್ಲಿ ಮಟನ್ ಕರ್ರಿ ಇಲ್ಲ ಎಂಬ ಕಾರಣಕ್ಕೆ ವರ ಮದುವೆಯನ್ನೇ ಕ್ಯಾನ್ಸಲ್ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ತೆಲಂಗಾಣದಲ್ಲಿ ನಡೆದಿದೆ ಎನ್ನಲಾಗಿದೆ. ಊಟದ ಮೆನುವಿನಲ್ಲಿ ಮಟನ್ ಬೋನ್ ಮ್ಯಾರೋ (Mutton Bone Marrow) ಇಲ್ಲ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದಾರೆ. ನಿಜಾಮಾಬಾದ್ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೆ ಮದುವೆ ನಿಶ್ಚಯವಾಗಿತ್ತು. ಈ ಮದುವೆ ಕಳೆದ ನವೆಂಬರ್ ತಿಂಗಳಲ್ಲಿ ವಧುವಿನ ಮನೆಯಲ್ಲಿ ನೆರವೇರಿತ್ತು. ಈಗ ಸಣ್ಣ ವಿಚಾರವೊಂದು ಮದುವೆ ರದ್ದಾಗಲು ಕಾರಣವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಮುಂದಾಗಿದ್ದರು.