ಬೆಂಗಳೂರು : ರಾಜ್ಯ ಸರ್ಕಾರಗಳಿಗೆ ನೀಡಬೇಕಾದ ಜಿಎಸ್‍ಟಿ ಪರಿಹಾರದ ಕೊರತೆಯ ಮೊತ್ತವನ್ನು ಆರ್‍ಬಿಐನಿಂದ ಸಾಲದ ರೂಪದಲ್ಲಿ ಪಡೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ಹೇಳಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕೇಂದ್ರದ ಈ ಸೂಚನೆಯನ್ನು ಕರ್ನಾಟಕ ರಾಜ್ಯ ಸರ್ಕಾರ ಕೂಡ ತಿರಸ್ಕರಿಸಬೇಕು ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಜಿಎಸ್‍ಟಿ ಪರಿಹಾರ ಹಂಚಿಕೆ ವಿಚಾರವಾಗಿ ನೀಡಿರುವ ಎರಡು ಆಯ್ಕೆಗಳನ್ನು ಕರ್ನಾಟಕ ಕೂಡ ತಿರಸ್ಕರಿಸಬೇಕು. ಕೇಂದ್ರ ಸರ್ಕಾರದ ತಪ್ಪುಗಳಿಗೆ ರಾಜ್ಯಗಳ ಮೇಲೆ ಹೊರೆ ಹಾಕಲು ಸಾಧ್ಯವಿಲ್ಲ. ರಾಜ್ಯವು ಸಾಲ ಪಡೆದುಕೊಳ್ಳುವ ಬದಲು ಕೇಂದ್ರ ಸರ್ಕಾರವೇ ಸಾಲು ಪಡೆದುಕೊಂಡು ರಾಜ್ಯಗಳಿಗೆ ಬರಬೇಕಾದ ಪರಿಹಾರದ ಮೊತ್ತವನ್ನು ಒದಗಿಸುವಂತೆ ರಾಜ್ಯ ಸರ್ಕಾರ ಒತ್ತಾಯಿಸಲಿ ಎಂದು ಮಲ್ಲಿಕಾರ್ಜುನ್ ಖರ್ಗೆ ಸಲಹೆ ನೀಡಿದ್ದಾರೆ.
ಇದೇ ವೇಳೆ ವಿತ್ತ ಸಚಿವೆಯ ದೇವರ ಆಟ ಎಂಬ ಹೇಳಿಕೆ ಬಗ್ಗೆ ಮಾತನಾಡಿದ ಖರ್ಗೆ, ರಾಜ್ಯ ಸರ್ಕಾರಗಳು ಈಗಾಗಲೇ ತೀವ್ರ ಆರ್ಥಿಕ ಒತ್ತಡದಿಂದ ಸಂಕಷ್ಟದಲ್ಲಿವೆ. ಜಿಎಸ್‍ಟಿ ಪರಿಹಾರದ ಪಾವತಿ ನಿರಾಕರಿಸುವುದು ರಾಜ್ಯಗಳಿಗೆ ಮತ್ತಷ್ಟು ಗಾಸಿ ಮಾಡಲಿವೆ. ಎಂದಿಗೂ ಉಂಟಾಗದ ‘ದೇವರ ಆಟ’ವನ್ನು ಪ್ರತಿಪಾದಿಸುವ ಮೂಲಕ ಕೇಂದ್ರ ಸರ್ಕಾರ ತನ್ನ ಬದ್ಧತೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಇದು ಒಕ್ಕೂಟ ವ್ಯವಸ್ಥೆಯ ಮೇಲಿನ ನಂಬಿಕೆಯ ಉಲ್ಲಂಘನೆ ಎಂದು ಟೀಕಿಸಿದ್ದಾರೆ.
ಶ್ರೀ ಅನ್ನಪೂರ್ಣೆಶ್ವರಿ ಜ್ಯೋತಿಷ್ಯ ಪೀಠಂ
ಶ್ರೀ ಮಹಾ ಕಾಲ ಭೈರವ
ದೈವಜ್ಞ ಪಂಡಿತ್ ಗಜೇಂದ್ರ ಅವಧಾನಿಗಳು
ವಿಳಾಸ – ಡಿವಿಜಿ ರೋಡ್, ಬಸವನಗುಡಿ ಬೆಂಗಳೂರು
ಸರ್ವ ಸಮಸ್ಯೆಗಳಿಗೆ ಗುರುಗಳನ್ನು ಒಮ್ಮೆ ಭೇಟಿ ಕೊಡಿ
ಸಂಪರ್ಕಿಸಿ – 9538175275








