ಕಾರು ಖರೀದಿಯ ವಿಚಾರವಾಗಿ ನಡೆಯುತ್ತಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಶಿಕ್ಷಕ ತನ್ನ ಪತ್ನಿಯನ್ನು ಕೊಲೆ ಮಾಡಿ ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಶಿಕ್ಷಕನು ಕೋಪದಲ್ಲಿ ಪತ್ನಿಯ ಕಪಾಳಕ್ಕೆ ಹೊಡೆದಿದ್ದಾನೆ. ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪತ್ನಿಯ ಸಾವನ್ನು ಮರೆ ಮಾಚಲು ದೇಹಕ್ಕೆ ಬೆಂಕಿ ಹಚ್ಚಿದ್ದಾನೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಪರಿಶೀಲನೆ ನಡೆಸಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಿದ್ದಾನೆ.
ಅರ್ಧ ಸುಟ್ಟ ಶವದ ಮರಣೋತ್ತರ ಪರೀಕ್ಷೆ ನಡೆಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಈ ದಂಪತಿ ಉತ್ತರ ಪ್ರದೇಶ ಮೂಲದವರಾಗಿದ್ದು, ಕಳೆದ ನಾಲ್ಕೇ ತಿಂಗಳ ಹಿಂದೆ ಮದುವೆಯಾಗಿತ್ತು. ಇವರು ಸೆಂಟ್ರಲ್ ಕೋಲ್ಕತ್ತಾದ 24 ಜಾದುನಾಥ್ ಡೇ ರಸ್ತೆಯಲ್ಲಿನ ಎರಡನೇ ಮಹಡಿಯ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು. ದೀಪ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ಹೇಳಿದ್ದಾರೆ.