ಕೋಲಾರ: ಮುಖ್ಯಶಿಕ್ಷಕಿ (headmiss)ಯ ಸಲಹೆಯಂತೆ ಸರ್ಕಾರಿ ಶಾಲೆಯಲ್ಲಿದ್ದ ವಸ್ತುಗಳನ್ನು ಕಳ್ಳತನ (Theft) ಮಾಡಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.
ತಾಲೂಕಿನ ಶಾಪುರ ಗ್ರಾಮದ ಶಾಪುರ ಸರ್ಕಾರಿ ಫ್ರೌಡಶಾಲೆಯಲ್ಲಿ ನಡೆದಿದೆ. ಸರ್ಕಾರಿ ಫ್ರೌಢಶಾಲೆಯ ಸಿಬ್ಬಂದಿ ಶಿವಕುಮಾರ್ ಎಂಬ ವ್ಯಕ್ತಿ ಕಳ್ಳತನ ಮಾಡಿ ಸಿಕ್ಕಿ ಬಿದ್ದವ. ಕಳ್ಳತನಕ್ಕೆ ಶಾಲೆಯ ಮುಖ್ಯಶಿಕ್ಷಕಿ ಪದ್ಮಾವತಿ ಅವರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಶಾಲೆಯಲ್ಲಿದ್ದ ಬಾಗಿಲು ಸೇರಿದಂತೆ ದಿನಸಿ ವಸ್ತುಗಳ ಕಳ್ಳತನ ಮಾಡಲು ಯತ್ನಿಸಿ, ಗ್ರಾಮಸ್ಥರ ಕೈಗೆ ಸಿಕ್ಕಿದ್ದಾನೆ. ಈ ಸಂದರ್ಭದಲ್ಲಿ ಪ್ರಶ್ನಿಸಿದಾಗ ಮುಖ್ಯ ಶಿಕ್ಷಕಿ ಕಳ್ಳತನಕ್ಕೆ ಹೇಳಿದ್ದರು ಎಂದು ಹೇಳಿದ್ದಾರೆ. ಹೀಗಾಗಿ ಶಿಕ್ಷಕಿ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.