ವಿದ್ಯಾರ್ಥಿನಿ ಬಟ್ಟೆ ಬಿಚ್ಚಿ ರೂಂನಲ್ಲಿ ಕೂಡಿಹಾಕಿದ ಮುಖ್ಯ ಶಿಕ್ಷಕಿ

1 min read
School Child Saaksha Tv

ವಿದ್ಯಾರ್ಥಿನಿ ಬಟ್ಟೆ ಬಿಚ್ಚಿ ರೂಂನಲ್ಲಿ ಕೂಡಿಹಾಕಿದ ಮುಖ್ಯ ಶಿಕ್ಷಕಿ

ಮಂಡ್ಯ: ಇತ್ತೀಚಿಗೆ ಶಾಲೆಗಳಲ್ಲಿ ಶಿಕ್ಷಕರೇ ಅನಾಗರಿಕರಂತೆ ವರ್ತಿಸುತ್ತಿದ್ದು, ಇಂತಹದೆ ಘಟನೆಯೊಂದು ಜಿಲ್ಲೆಯ ಗಣಂಗೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಶಾಲೆಗೆ ಮೊಬೈಲ್ ತಂದ ಒಂದೇ ಕಾರಣಕ್ಕೆ ಮುಖ್ಯ ಶಿಕ್ಷಕಿ ಸ್ನೇಹಲತಾ ವಿದ್ಯಾರ್ಥಿನಿಗೆ ಬಟ್ಟೆ ಬಿಚ್ಚಿಸಿ ಕೊಠಡಿಯಲ್ಲಿ ಕೂಡಿ ಹಾಕಿದ್ದಾರೆ.

Government School Gonanguru Saaksha tv

ಪ್ರಸ್ತುತ ವಿದ್ಯಾರ್ಥಿನಿಯು ಎಂಟನೇ ತರಗತಿಯಲ್ಲಿ ಓದುತ್ತಿದ್ದು, ಘಟನೆಯು ಕಳೆದ ಒಂದು ವಾರದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೊಬೈಲ್ ತಂದಿರೋದನ್ನ ಗಮನಿಸಿದ ಮುಖ್ಯ ಶಿಕ್ಷಕಿ ವಿದ್ಯಾರ್ಥಿನಿಯನ್ನ ಬೇರೆ ಕೊಠಡಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯು ಮುಖ್ಯ ಶಿಕ್ಷಕಿ ವಿರುದ್ದ ಆರೋಪ ಮಾಡಿದ್ದಾರೆ.

ಸದ್ಯ ಮುಖ್ಯ ಶಿಕ್ಷಕಿಯ ವಿರುದ್ದ ದೂರು ನೀಡಲು ಪೋಷಕರು ಮುಂದಾಗಿದ್ದಾರೆ. ಬಾಲಕಿಯನ್ನು ಅಮಾನವೀಯವಾಗಿ ನಡೆಸಿಕೊಂಡಿರೊ ಮುಖ್ಯಶಿಕ್ಷಕಿಯ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಪೋಷಕರು ಒತ್ತಾಯಿಸುತ್ತಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd