ಬೆಂಗಳೂರು : ಸಿಎಂ ಸಿದ್ದರಾಮಯ್ಯ (CM Siddaramaiah) ಪರ ಮಂತ್ರಿಗಳು ನಿಲ್ಲಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Singh Surjewala), ಸಂಸದ ವೇಣುಗೋಪಾಲ್ (K. C. Venugopal) ಸೂಚಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಹೇಳಿದ್ದಾರೆ.
ಸಿದ್ದರಾಮಯ್ಯ ನಿವಾಸದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಕುರಿತು ಅನಾವಶ್ಯಕ ಆಪಾದನೆಗಳನ್ನು ಮಾಡಿ ವಿರೋಧ ಪಕ್ಷದವರು ಪಾದಯಾತ್ರೆ ಮಾಡುತ್ತಿದ್ದಾರೆ. ಅದಕ್ಕೆ ಸರಿಯಾದ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ಪ್ರತಿಯೊಬ್ಬ ಸಚಿವರು ಅದರ ಬಗ್ಗೆ ಮಾತಾಡಬೇಕು ಎಂದು ಸೂಚಿಸಿದ್ದಾರೆ ಎದು ಹೇಳಿದ್ದಾರೆ.
ಮಂತ್ರಿಗಳ ಬದಲಾವಣೆ, ಸಂಪುಟ ಪುನರ್ ರಚನೆ ಬಗ್ಗೆ ಸುರ್ಜೇವಾಲ ಮತ್ತು ವೇಣುಗೋಪಾಲ್ ಜೊತೆ ಯಾವುದೇ ಚರ್ಚೆ ಆಗಿಲ್ಲ. ಮುಂದಿನ ದಿನಗಳಲ್ಲಿ ಈ ಕುರಿತು ಚರ್ಚೆಯಾಗಬಹುದು. ನಾವೆಲ್ಲ ಒಟ್ಟಾಗಿ ಕೆಲಸ ಮಾಡಿ ಸರ್ಕಾರಕ್ಕೆ ಒಳ್ಳೆ ಹೆಸರು ತರಬೇಕು ಎಂದು ಹೇಳಿದ್ದಾರೆ ಅಷ್ಟೇ. ಆ ಕುರಿತು ಯಾವುದೇ ಪ್ರಸ್ತಾವ ಬಂದಿಲ್ಲ ಎಂದು ಹೇಳಿದ್ದಾರೆ.