ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ನೀಡುವಂತೆ ಸೂಚಿಸಿದ ಹೈಕೋರ್ಟ್ Saaksha Tv
ಬೆಂಗಳೂರು : ವರದಕ್ಷಿಣೆ ಕಿರುಕುಳ ಸಾವು ಪ್ರಕರಣದ ಆರೋಪಿಗಳಿಗೆ ಜಾಮೀನು ನೀಡಿದ್ದ ಮೈಸೂರು ಜಿಲ್ಲಾ ನ್ಯಾಯಾಧೀಶರಿಗೆ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ನೀಡುವಂತೆ ಹೈಕೋರ್ಟ್ ಆದೇಶಿಸಿದೆ.
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸುನಿಲ್ಕುಮಾರ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರಿದ್ಧ ಪೀಠ, ಈ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ ಪ್ರಕರಣದ ಆರೋಪಿಗಳಾದ ಮಂಜು (ಪತಿ) ಹಾಗೂ ಶಿವಮ್ಮ (ಅತ್ತೆ)ಗೆ ಎಂಬುವರಿಗೆ ನೀಡಿದ್ದ ಜಾಮೀನು ರದ್ದುಪಡಿಸಿದೆ.
ಘೋರ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡುವ ಮುನ್ನ ನ್ಯಾಯಾಂಗ ವಿವೇಚನೆ ಬಳಸುವುದನ್ನು ನ್ಯಾಯಾಧೀಶರು ತಿಳಿಯಬೇಕಿದೆ. ಆದ್ದರಿಂದ, ಮೈಸೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ತರಬೇತಿಗಾಗಿ ನ್ಯಾಯಾಂಗ ಅಕಾಡೆಮಿಗೆ ಕಳುಹಿಸಿ ಎಂದು ನಿರ್ದೇಶಿಸಿದೆ.
ವರದಕ್ಷಿಣೆ ಸಾವಿನಂತಹ ಘೋರ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ನೀಡುವ ಮುನ್ನ ವಿಚಾರಣಾ ನ್ಯಾಯಾಲಯವು ನ್ಯಾಯಾಂಗ ವಿವೇಚನೆ ಸರಿಯಾಗಿ ಬಳಸಿಲ್ಲ. ವಕ್ರ ಮತ್ತು ವಿಚಿತ್ರವಾದ ಆದೇಶಗಳನ್ನು ಹೊರಡಿಸಿದೆ. ವಿಚಾರಣಾ ನ್ಯಾಯಾಲಯ ತನ್ನ ಆದೇಶದಲ್ಲಿ, ಆರೋಪಿಗಳ ವಿರುದ್ಧ ಜೀವಾವಧಿ ಅಥವಾ ಮರಣದಂಡನೆ ವಿಧಿಸುವಂತಹ ಆರೋಪಗಳಿಲ್ಲ ಎಂದು ಹೈಕೋರ್ಟ್ ಹೇಳಿದೆ.
ಮೃತ ಸುನಿತಾ ಧ್ವನಿಮುದ್ರಿಕೆ ನೆರೆಮನೆಯವರ ಬಳಿ ಸಿಕ್ಕ ನಂತರವೇ ದೂರು ದಾಖಲಿಸಲಾಗಿದೆ. ಮೊಬೈಲ್ ಆಕೆಯದ್ದೇ ಅಥವಾ ಬೇರೆಯವರದ್ದೇ ಎಂಬುದನ್ನು ಹಾಗೂ ವಾಯ್ಸ್ ಮೆಸೇಜ್ನಲ್ಲಿರುವ ಧ್ವನಿ ಯಾರದ್ದು ಎಂಬುದನ್ನು ವಿಚಾರಣೆ ವೇಳೆ ಗುರುತಿಸಬೇಕಾಗುತ್ತದೆ.








