ಬೆಂಗಳೂರು: 5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅನುಮತಿ ನೀಡಿ ಆದೇಶ ಹೊರಡಿಸಿದೆ.
ಹೈಕೋರ್ಟ್ನ ಏಕಸದಸ್ಯ ಪೀಠದ ಶಾಲೆಗಳ ಬೋರ್ಡ್ ಪರೀಕ್ಷೆ ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ಹಿಡಿದಿದ್ದು, ಬೋರ್ಡ್ ಪರೀಕ್ಷೆ ನಡೆಸಲು ಅವಕಾಶ ನೀಡಿದೆ. 5,8,9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಸರ್ಕಾರದ ಈ ಆದೇಶವನ್ನು ಪ್ರಶ್ನಿಸಿ ಅನುದಾನ ರಹಿತ ಶಾಲೆಗಳ ಸಂಘ ಹೈಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಹೈಕೋರ್ಟ್ ಏಕಸದಸ್ಯ ಪೀಠ ಇದನ್ನು ರದ್ದು ಮಾಡಿತ್ತು. ಹೀಗಾಗಿ ಸರ್ಕಾರವು ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿತ್ತು.