ಕಾರವಾರ : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಎಸ್ ವೈ ಅವರ ಬಗ್ಗೆ ಅನುಕಂಪ ಹೊಂದಿದ್ದಾರೆ ಎಂಬ ವಿಚಾರದ ಬಗ್ಗೆ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದು, ದೇವೇಗೌಡರಿಗೆ ಬಿಎಸ್ ವೈ ಬಗ್ಗೆ ಅನುಕಂಪವಿದೆ. ಬಿಎಸ್ ವೈ ಭ್ರಷ್ಟಾಚಾರದ ಹಣವನ್ನು ಚೆಕ್ ಮೂಲಕ ತೆಗೆದುಕೊಂಡ ಏಕೈಕ ಮುಖ್ಯಮಂತ್ರಿ ಆಗಿದ್ದು, ಅವರ ಬಗ್ಗೆ ಅನುಕಂಪ ಇರುವ ನಾಯಕರು ಸಹ ಅದೇ ಜಾತಿಯವರು ಎಂದು ಹೇಳಿದ್ದಾರೆ.
ಕಾರವಾರದಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವಿನ ಹನಿಮೂನ್ ಮುಗಿದು ಹೋಗಿದೆ. ಕಾಂಗ್ರೆಸ್ ಸರ್ಕಾರದ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ ಭ್ರಷ್ಟಾಚಾರದ ಆರೋಪ ಮಾಡಿದರೆ ಸಾಬೀತು ಮಾಡಲಿ ಎಂದು ಸವಾಲ್ ಹಾಕಿದರು.
ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಹರಿಪ್ರಸಾದ್, ಬಿಜೆಪಿಯಲ್ಲಿ ಮುಖ್ಯಮಂತ್ರಿ ಬದಲು ಮಾಡುವವರು ದೆಹಲಿಯಲ್ಲಿದ್ದಾರೆ. ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ವ್ಯಂಗ್ಯವಾಡಿದರು.