ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಪತ್ನಿಯ ಮೇಲೆ ನಡು ರಸ್ತೆಯಲ್ಲಿಯೇ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಗೆ ಮಚ್ಚಿನಿಂದ ಹೊಡೆದಿರುವ ಈ ಘಟನೆ ಸಿಲಿಕಾನ್ ಸಿಟಿಯ ಜೀವನ್ ಭೀಮಾ ನಗರದ ವಿಂಡ್ ಟನಲ್ ರಸ್ತೆಯಲ್ಲಿ ನಡೆದಿದೆ. ಶೇಕ್ ಮುಜೀಬ್ ಎಂಬ ವ್ಯಕ್ತಿ ನೈಗರ್ (28) ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಹೆಂಡ್ತಿ ಬೇರೊಬ್ಬನ ಜತೆ ಸಂಬಂಧ ಹೊಂದಿದ್ದಾಳೆಂದು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ.
ಸದ್ಯ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧಿಸಿರುವ ಜೆ.ಬಿ. ನಗರ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.