ಥಾಣೆ: ಫ್ಯಾಷನ್ ಬಳಿ ತೊಟ್ಟಿದ್ದಾಳೆಂದು ಪತಿಯೊಬ್ಬಾತ ಪತ್ನಿಯನ್ನು ಥಳಿಸಿರುವ ಘಟನೆ ನಡೆದಿದೆ.
ಪತಿ ಹಾಗೂ ಆತನ ಇಬ್ಬರು ಸಂಬಂಧಿಕರ ಮೇಲೆ ದೂರು ದಾಖಲಾಗಿದ್ದು, ನವಿಮುಂಬಯಿನಲ್ಲಿ (Navi Mumbai) ಈ ಘಟನೆ ನಡೆದಿದೆ. 23 ವರ್ಷದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಫ್ಯಾಶನ್ ಬಳೆ ತೊಟ್ಟಿದ್ದಕ್ಕೆ ಪತಿ 30 ವರ್ಷದ ಪ್ರದೀಪ್ ಅರ್ಕಾಡೆಯು ಎಂಬಾತ ಪತ್ನಿಗೆ ಬೆಲ್ಟ್ ನಿಂದ ಥಳಿಸಿದ್ದಾನೆ. ನ. 13 ರಂದು 50 ವರ್ಷದ ಅತ್ತೆ ಮಹಿಳೆಯ ಕೂದಲು ಎಳೆದಾಡಿ ಕಪಾಳಮೋಕ್ಷ ಮಾಡಿದ್ದಾಳೆ. ಪತಿ ಬೆಲ್ಟ್ ನಿಂದ ಥಳಿಸಿದ್ದಾನೆ. ಆಗ ಅತ್ತೆ ನೆಲಕ್ಕೆ ತಳ್ಳಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.