ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ (Siruguppa, Bellary) ತಾಲೂಕಿನ ಬಲಕುಂದಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಸೂಲ್ ಸಾಬ್ ತನ್ನ ಪತ್ನಿ ಮೈಬುನಾ ಬಿ(35) ಅವರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ. ಈತ ಲಾರಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಆದರೆ, ಇತ್ತೀಚೆಗೆ ಆತನಿಗೆ ಕಿಡ್ನಿ ವೈಫಲ್ಯವಾಗಿತ್ತು. ಆದರೆ, ಪತ್ನಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.