ದಾವಣಗೆರೆ: ಮೂರ ತಿಂಗಳ ಗರ್ಬಿಣಿ ಪತ್ನಿಗೆ ಹೆಲ್ಮೆಟ್ ನಿಂದ ಹೊಡೆದು ಕೊಲೆ ಮಾಡಿ ನಂತರ ಅಪಘಾತ ಎಂಬಂತೆ ಬಿಂಬಿಸಲು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.
ಹೀಗೆ ಸಾವನ್ನಪ್ಪಿದ ಗರ್ಭಿಣಿಯನ್ನು ಯಶೋದಾ ಎಂದು ಗುರುತಿಸಲಾಗಿದ್ದು, ಜಿಲ್ಲೆಯ ಚನ್ನಗಿರಿ ತಾಲೂಕಿಗ ನುಗ್ಗಿಹಳ್ಳಿ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ. ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ನಿವಾಸಿ ಯಶೋದಾ, ನರಗನಹಳ್ಳಿ ಗ್ರಾಮದ ತಿಪ್ಪೇಶ್ (28) ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು.
ಜ. 4ರಂದು ಪತಿಯೊಂದಿಗೆ ತವರಿಗೆಬಂದಿದ್ದರು. ನಂತರ ಮರಳಿ ಹೋಗುತ್ತಿರುವಾಗ ಬೈಕ್ ಅಪಘಾತವಾಗಿ ಸಾವನ್ನಪ್ಪಿದ್ದಾಳೆ ಎಂದು ಸಂಬಂಧಿಕರಿಗೆ ತಿಪ್ಪೇಶ್ ಮಾಹಿತಿ ನೀಡಿದ್ದಾನೆ. ಆದರೆ, ಶವ ನೋಡಿದ ಮಹಿಳೆಯ ತಂದೆಗೆ ಕೊಲೆಯ ಶಂಕೆ ವ್ಯಕ್ತವಾಗಿದೆ. ಪುತ್ರಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿಲ್ಲ ಕೊಲೆಯಾಗಿದೆ ಎಂದು ದೂರು ನೀಡಿದ್ದಾರೆ. ಪೊಲೀಸರು ತನಿಖೆ ಕೈಗೊಂಡಾಗ ಸತ್ಯಾಂಶ ಬಯಲಿಗೆ ಬಂದಿದೆ. ಈ ಕುರಿತು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








