ಕೊಪ್ಪಳ: ಬಿಜೆಪಿಯೊಂದಿಗೆ ಮೈತ್ರಿ ಆಗಿದ್ದೇವೆಂಬ ಕಾರಣಕ್ಕೆ ನಮ್ಮ ಸಿದ್ಧಾಂತ ಬಿಡಲು ಆಗುವುದಿಲ್ಲ ಎಂದು ಜೆಡಿಎಸ್(JDS) ರಾಜ್ಯ ಮುಖಂಡ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ (Koppal) ನಗರದಲ್ಲಿ ಮಾತನಾಡಿರುವ ಅವರು, ರಾಜ್ಯ ಸರ್ಕಾರ ಐದು ಗ್ಯಾರಂಟಿ ಜಾರಿಗೆ ತಂದು ಅಭಿವೃದ್ಧಿ ಮರೆತಿದೆ. ಹೀಗಾಗಿ ಆರ್ಥಿಕ ಸ್ಥಿತಿ ಸರಿಯಾಗಿಲ್ಲ. ಇದರಿಂದಾಗಿ ರಾಜ್ಯದ ಅಭಿವೃದ್ಧಿ ಕಾರ್ಯಗಳು ತೀರಾ ಹಿಂದುಳಿದಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಮಾತನಾಡಿರುವ ಅವರು, ಎನ್ಡಿಎ ಅಭ್ಯರ್ಥಿ ಗೆಲ್ಲಿಸುವ ಹೊಣೆ ಪಕ್ಷದ ಕಾರ್ಯಕರ್ತರ ಮೇಲಿದೆ. ಜನಾಭಿಪ್ರಾಯ ಸಂಗ್ರಹಿಸಿ ವರಿಷ್ಠರೆದುರು ನೀಡುತ್ತೇವೆ. ಯೋಗೇಶ್ವರ್ ಅವರು ಸದ್ಯ ಎಂಎಲ್ಸಿಯಾಗಿದ್ದಾರೆ. ಅವರ ಅಧಿಕಾರಾವಧಿ ಇನ್ನೂ ಇದೆ. ಟಿಕೆಟ್ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತಾರೆ. ಯಾರಿಗೆ ಅವಕಾಶ ನೀಡಬೇಕು ಎಂಬುವುದನ್ನು ಜನರು ತೀರ್ಮಾನಿಸುತ್ತಾರೆ ಎಂದು ಹೇಳಿದ್ದಾರೆ.
ಕುಮಾರಸ್ವಾಮಿಯವರು (HD Kumaraswamy) ರಾಜಕಾರಣದಲ್ಲಿ ಹಿಟ್ ಆಂಡ್ ರನ್ ಮಾಡಲ್ಲ. ಸಮರ್ಪಕ ಸಾಕ್ಷ್ಯಾಧಾರ ಇದ್ದಾಗ ಮಾತ್ರ ವಿಷಯ ಪ್ರಸ್ತಾಪಿಸುತ್ತಾರೆ. ಸಮಯ ಬಂದಾಗ ಸಾಕ್ಷ್ಯಗಳನ್ನು ಒಂದೊಂದಾಗಿ ಬಿಡುಗಡೆ ಮಾಡುತ್ತಾರೆ. ನಾವು ಬಿಜೆಪಿ ಜೊತೆ ಕೈ ಜೋಡಿಸಿದ್ದೇವೆ ಎಂದ ಮಾತ್ರಕ್ಕೆ ಪಕ್ಷದ ಸಿದ್ಧಾಂತಗಳನ್ನು ಮಾರಾಟಕ್ಕಿಟ್ಟಿಲ್ಲ. ಬಿಜೆಪಿ ಜೊತೆ ಶಾಶ್ವತ ಹೊಂದಾಣಿಕೆಗಾಗಿ ದೇವೇಗೌಡರು ತಮ್ಮ ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ಮೊದಲ ಸಲ ಕೈ ಜೋಡಿಸಿದ್ದಾರೆ. ನಮ್ಮದು ಎಲ್ಲ ಸಮಾಜಗಳ ಹಿತ ಕಾಯುವ ಪಕ್ಷ ಎಂದು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೊದಲ ಹಂತದ ಚುನಾವಣೆ!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu & Kashmir) ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಮತದಾನ...