ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 75ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಮುನ್ನಾ ದಿನ ದೇಶ ಉದ್ಧೇಶಿಸಿ ಮಾತನಾಡಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯು ದೇಶಕ್ಕೆ ಐತಿಹಾಸಿಕ ಕ್ಷಣವಾಗಿದೆ ಎಂದು ವರ್ಣಿಸಿದ್ದಾರೆ. ಅಲ್ಲದೇ, ಬಿಹಾರ ಮಾಜಿ ಸಿಎಂ ಕರ್ಪೂರಿ ಠಾಕೂರ್ ಅವರು ಸಮಾಜಕ್ಕೆ ನೀಡಿದ ಕೊಡುಗೆ ಸ್ಮರಿಸಿದ್ದಾರೆ.
ಪ್ರಾಣ ಪ್ರತಿಷ್ಠಾಪನೆ ಸಮಾರಂಭವು ಭಾರತದ ನಾಗರಿಕತೆಯ ಪರಂಪರೆಯ ಮರು ಅನ್ವೇಷಣೆಯಲ್ಲಿ ಹೆಗ್ಗುರುತಾಗಿ ನೋಡುತ್ತಾರೆ. ಭೂ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ ದೇವಾಲಯದ ನಿರ್ಮಾಣವು ಆರಂಭವಾಯಿತು. ಅದು ಭವ್ಯ ಸೌಧವಾಗಿ ನಿಂತಿದೆ. ಇದು ಜನರ ನಂಬಿಕೆಗೆ ಸೂಕ್ತವಾದ ಅಭಿವ್ಯಕ್ತಿಯನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಭಾರತ ರತ್ನ ಪ್ರಶಸ್ತಿಗೆ ಭಾಜನರಾಗಿರುವ ಕರ್ಪೂರಿ ಠಾಕೂರ್ ಅವರನ್ನು ಗುಣಗಾನ ಮಾಡಿದ್ದಾರೆ.