ಕೋಲಾರ: ಈದ್ ಮಿಲಾದ್ ಹಬ್ಬದ ಸಂಭ್ರಮದಲ್ಲಿದ್ದ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಐವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೋಲಾರದ ಕ್ಲಾಕ್ ಟವರ್ ಹತ್ತಿರ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದೆ. ಮುಸ್ಲಿಂ ಸಮುದಾಯದ ಎರಡು ಗುಂಪುಗಳ ಮಧ್ಯೆಯೇ ಈ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಮಾರಕಾಸ್ತ್ರಗಳಿಂದ ಒಂದು ಗುಂಪು ಮತ್ತೊಂದು ಗುಂಪಿನವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಸೈಯದ್ ಸಲ್ಮಾನ್, ಸೈಫ್, ಹುಸೇನ್ ಕಾಷಿಪ್, ಕಲೀಲ್ ಅಹ್ಮದ್ ಎಂಬುವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಯ್ಯದ್ ವಸೀಂ ಪಾಷಾ, ಥಾಹೀರ್ ಗುಂಪಿನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು ಅರೋಪಿಗಳು ಪರಾರಿಯಾಗಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸ್ಥಳಕ್ಕೆ ಧಾವಿಸಿದ್ದು, ಗುಂಪುಗೂಡಿದ್ದ ಜನರನ್ನು ಚದುರಿಸಿದ ನಂತರ ಮೆರವಣಿಗೆ ಮುಂದೆ ಸಾಗಿದೆ.
ಪೊಲೀಸರು ಗುಂಪನ್ನು ಚದುರಿಸಿ ಕಳುಹಿಸಿದ್ದಾರೆ. ನಗರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಕೋಲಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.