ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು-ಕಾಶ್ಮೀರ : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.
ಅನಂತನಾಗ್ ಜಿಲ್ಲೆಯ ಪಹಲ್ಗಾಮ್ನ ಶ್ರೀಚಂದ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ಮಧ್ಯೆ ಗುಂಡಿನ ಚಕಮಕಿ ನಡೆಯುತ್ತಿದೆ.
ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ ಆಗಮಿಸಿದ್ದು, ಉಗ್ರರನ್ನು ಸುತ್ತುವರೆದಿದ್ದಾರೆ. ಸ್ಥಳದಲ್ಲೇ ಇನ್ನೂ ಗುಂಡಿನ ಚಕಮಕಿ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.