ADVERTISEMENT
Monday, August 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ದಾಖಲೆಯ ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡ ಭಾರತ ತಂಡ

600ಕ್ಕೂ ಅಧಿಕ ರನ್ ಗಳಿಸಿದ ಭಾರತ ಮಹಿಳಾ ತಂಡ

Author2 by Author2
June 29, 2024
in Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಮಹಿಳೆಯರು (Team India) ಬೃಹತ್ ಮೊತ್ತ ಪೇರಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಪಂದ್ಯದ ಮೊದಲ ದಿನದಾಟದಲ್ಲಿ 525 ರನ್ ಕಲೆಹಾಕಿದ್ದ ಭಾರತ ತಂಡವು ಎರಡನೇ ದಿನದಾಟದ ಮೊದಲ ಸೆಷನ್ ನಲ್ಲಿಯೇ ಡಿಕ್ಲೇರ್ ಮಾಡಿಕೊಂಡಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಟೀಮ್ ಇಂಡಿಯಾ ನಾಯಕಿ ಹರ್ಮನ್ಪ್ರೀತ್ ಕೌರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಸ್ಮೃತಿ ಮಂಧಾನ ಹಾಗೂ ಶಫಾಲಿ ವರ್ಮಾ ಭರ್ಜರಿ ಆರಂಭ ನೀಡಿದ್ದರು. ಈ ಇಬ್ಬರು ಆಟಗಾರರು ಮೊದಲ ವಿಕೆಟ್ ಗೆ ಬರೋಬ್ಬರಿ 292 ರನ್ ಗಳಿಸಿ ದಾಖಲೆ ನಿರ್ಮಿಸಿದ್ದರು.
161 ಎಸೆತಗಳನ್ನು ಎದುರಿಸಿದ್ದ ಸ್ಮೃತಿ ಮಂಧಾನ 1 ಸಿಕ್ಸ್ ಹಾಗೂ 27 ಫೋರ್ಗಳೊಂದಿಗೆ 149 ರನ್ ಗಳಿಸಿದ್ದರು. ಇನ್ನೊಂದೆಡೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದ ಶಫಾಲಿ ವರ್ಮಾ 197 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 24 ಫೋರ್ ಗಳೊಂದಿಗೆ 205 ರನ್ ಗಳಿಸಿದ್ದರು. ಈ ಮೂಲಕ ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ ದ್ವಿಶತಕ ಬಾರಿಸಿದ ಆಟಗಾರ್ತಿ ಎನಿಸಿಕೊಂಡಿದ್ದಾರೆ.

Related posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

August 28, 2026
‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

August 28, 2026

ನಂತರ ಬಂದ ಜೆಮಿಮಾ ರೊಡ್ರಿಗಾಸ್ (55) ಹಾಗೂ ಹರ್ಮನ್ಪ್ರೀತ್ ಕೌರ್ (69) ಅರ್ಧಶತಕ ಹಾಗೂ ವಿಕೆಟ್ ಕೀಪರ್ ರಿಚಾ ಘೋಷ್ 90 ಎಸೆತಗಳಲ್ಲಿ 16 ಫೋರ್ ಗಳೊಂದಿಗೆ 86 ರನ್ ಗಳಿಸಿದ್ದಾರೆ. ಹೀಗಾಗಿ ಭಾರತ ತಂಡ 115.1 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 603 ರನ್ ಕಲೆಹಾಕಿ ಮೊದಲ ಇನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.

ಈ 603 ರನ್ ಗಳೊಂದಿಗೆ ಮಹಿಳಾ ಟೆಸ್ಟ್ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ವಿಶ್ವದಾಖಲೆ ಭಾರತದ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಆಸ್ಟ್ರೇಲಿಯಾ ಪರ ಇತ್ತು. 2024 ರಲ್ಲಿ ಪರ್ತ್ ನಲ್ಲಿ ನಡೆದ ಸೌತ್ ಆಫ್ರಿಕಾ ಮಹಿಳಾ ತಂಡದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 575 ರನ್ ಗಲಿಸಿ ದಾಖಲೆ ಬರೆದಿತ್ತು. ಈಗ ಭಾರತೀಯ ಮಹಿಳಾ ತಂಡ ಈ ದಾಖಲೆ ಮುರಿದಿದೆ. ಅಲ್ಲದೇ, ಈ ದಾಖಲೆಯನ್ನು ಅಳಿಸಿ ಹಾಕಿ ಮಹಿಳಾ ಟೆಸ್ಟ್ ನಲ್ಲಿ 600ಕ್ಕೂ ಅಧಿಕ ರನ್ ಗಳಿಸಿ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

Tags: The Indian team declared by scoring record runs
ShareTweetSendShare
Join us on:

Related Posts

magnus-carlsen-yippee-chess-contest-bengaluru-channai

ವಿಶ್ವದ ನಂ.1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by admin
August 28, 2026
0

ಬೆಂಗಳೂರು: ನೀವು ಚೆಸ್ ಆಟದಲ್ಲಿ ಪರಿಣಿತರಾ? ವಿಶ್ವದ ದಿಗ್ಗಜ ಆಟಗಾರರೊಂದಿಗೆ ಒಮ್ಮೆಯಾದರೂ ಚೆಸ್ ಆಡಬೇಕು ಎಂಬ ಕನಸು ನಿಮಗಿದೆಯಾ? ಹಾಗಿದ್ದರೆ ನಿಮ್ಮ ಕನಸು ನನಸಾಗುವ ಸಮಯ ಬಂದಿದೆ!...

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

‘2036ರ ಒಲಿಂಪಿಕ್ಸ್‌ಗಾಗಿ ಸಿದ್ಧತೆ ಇಂದಿನಿಂದಲೇ ಆರಂಭವಾಗಬೇಕು’: ಪ್ರಧಾನಿ ಮೋದಿ

by Shwetha
August 28, 2026
0

2036ರ ಒಲಿಂಪಿಕ್ಸ್‌ನಲ್ಲಿ ಭಾರತ ಹೆಚ್ಚಿನ ಪದಕಗಳನ್ನು ಗೆಲ್ಲುವ ಗುರಿಯೊಂದಿಗೆ ಕ್ರೀಡಾಪಟುಗಳ ಸಿದ್ಧತೆಯನ್ನು ಈಗಿನಿಂದಲೇ ಆರಂಭಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.'ಖೇಲ್ ಕಿ ಬಾತ್, PM...

9-dreams-bz-cup-media-cricket-tournament-kannada-media-auction

ಮಾಧ್ಯಮ ಸ್ನೇಹಿತರಿಗಾಗಿ ವಿನೂತನ ಕ್ರಿಕೆಟ್ ಟೂರ್ನಿ: ಮತ್ತೊಂದು ವಿಭಿನ್ನ ಪ್ರಯತ್ನ, ಪ್ರಯೋಗಕ್ಕೆ ಮುನ್ನಡಿ ಬರೆದ 9 ಡ್ರೀಮ್ಸ್ ಸಂಸ್ಥೆ

by admin
August 24, 2026
0

ಬೆಂಗಳೂರು: ಕನ್ನಡ ಮಾಧ್ಯಮ ರಂಗದಲ್ಲಿ ಇದೇ ಮೊದಲ ಬಾರಿಗೆ ವಿಭಿನ್ನ ಪರಿಕಲ್ಪನೆಯೊಂದಿಗೆ ಮಾಧ್ಯಮ ಸ್ನೇಹಿತರನ್ನು ಒಂದೇ ವೇದಿಕೆಯಲ್ಲಿ ಒಂದುಗೂಡಿಸುವ ವಿನೂತನ ಕ್ರಿಕೆಟ್ ಟೂರ್ನಿಗೆ 9 ಡ್ರೀಮ್ಸ್ ಸಂಸ್ಥೆ...

ks-shilpa-wins-bronze-para-shotput-commonwealth-games-2026-dk-shivakumar-honors

ಪ್ಯಾರಾ ಅಥ್ಲೀಟ್ ಕೆ.ಎಸ್. ಶಿಲ್ಪ ಅವರಿಗೆ ಅಭಿನಂದನೆ: 20 ಲಕ್ಷ ರೂ. ಚೆಕ್ ವಿತರಿಸಿದ ಸಿಎಂ ಡಿ.ಕೆ. ಶಿವಕುಮಾರ್

by admin
August 21, 2026
0

ಸ್ಕಾಟ್‌ಲ್ಯಾಂಡ್‌ನ ಗ್ಲಾಸ್ಗೋದಲ್ಲಿ ನಡೆದ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಪ್ಯಾರಾ ಶಾಟ್‌ಪುಟ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ದೇಶ ಹಾಗೂ ರಾಜ್ಯಕ್ಕೆ ಕೀರ್ತಿ ತಂದ ಪ್ಯಾರಾ ಅಥ್ಲೀಟ್...

anil-kumble-jumbo-fight-cricket-journey

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ ಬಂತು..?

by admin
August 10, 2026
0

ಜಂಬೋ ಅಂದ್ರೆ ಬರೀ ಅಡ್ಡ ಹೆಸರಲ್ಲ. ಅದು ಹೋರಾಟದ ಇನ್ನೊಂದು ಹೆಸರು..! ಅಷ್ಟಕ್ಕೂ ಅನಿಲ್ ಕುಂಬ್ಳೆಗೆ ಜಂಬೋ ಅಂತ ಹೆಸರಿಟ್ಟಿದ್ದು ಯಾರು..? ಜಂಬೋ ಅನ್ನೋ ಹೆಸರು ಹೇಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram