ಅಂಡರ್ 19 ವಿಶ್ವಕಪ್ ನಲ್ಲಿ ಭಾರತೀಯ ಯುವ ಪಡೆಯ ಭರ್ಜರಿ ಪ್ರದರ್ಶನ ಮುಂದುವರೆದಿದ್ದು, ಸದ್ಯ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ.
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ವಿಶ್ವಕಪ್ನಲ್ಲಿ ಭಾರತೀಯ ತಂಡ ಲೀಗ್ ಹಂತದಿಂದ ಸೂಪರ್ ಸಿಕ್ಸ್ ಹಂತದವರೆಗೆ ಒಟ್ಟು ಐದು ಪಂದ್ಯಗಳನ್ನು ಆಡಿ ಎಲ್ಲ ಪಂದ್ಯಗಳನ್ನೂ ಗೆದ್ದಿದೆ. ಈ ಮೂಲಕ ಭಾರತ ತಂಡವು ಸೆಮಿಫೈನಲ್ ಪ್ರವೇಶಿಸಿದೆ.
ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 200ಕ್ಕೂ ಅಧಿಕ ರನ್ ಗಳಿಂದ ಗೆಲುವು ಸಾಧಿಸಿತ್ತು. ಈಗ ಎರಡನೇ ಪಂದ್ಯದಲ್ಲಿ ನೇಪಾಳ ತಂಡವನ್ನು 132 ರನ್ ಗಳಿಂದ ಗೆದ್ದಿದೆ. ಈ ಗೆಲುವಿನೊಂದಿಗೆ ಭಾರತ ಗುಂಪು 1ರಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಸದ್ಯ ಭಾರತ ತಂಡವು ಗ್ರೂಪ್ 2ರಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡವನ್ನು ಸೆಮೀಸ್ ನಲ್ಲಿ ಎದುರಿಸಲಿದೆ.