ರಾಜಕೀಯ ಅಖಾಡಕ್ಕೆ ಇಳಿಯುವ ಸುಳಿವು ಕೊಟ್ಟ ಗಣಿಧಣಿ Saaksha Tv
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಬೇಡ ಎನ್ನುತ್ತಲೇ ತಾವು ಸ್ಪರ್ಧೆ ಮಾಡೋ ಕ್ಷೇತ್ರಗಳ ಪಟ್ಟಿಯನ್ನು ತೆರೆದಿಡುವ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ.
ಬಳ್ಳಾರಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನನಗೆ ಬಳ್ಳಾರಿ, ಗಂಗಾವತಿ, ಕೊಪ್ಪಳ, ಯಲಬುರ್ಗಾ, ಬೆಂಗಳೂರಿನ ಕೆ.ಆರ್.ಪುರಂ, ಬಿಟಿಎಂ ಲೇಔಟ್, ಕೋಲಾರದಲ್ಲಿ ಸ್ಪರ್ಧಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಜನಾರ್ದನ್ ರೆಡ್ಡಿ ಹೇಳಿದ್ದಾರೆ.
ನನ್ನ ಸಹೋದರರು ಶಾಸಕರಾಗಿದ್ದಾರೆ, ನಾನೂ ಶಾಸಕನಿದ್ದಂತೆ. ನನ್ನ ಮಿತ್ರ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯಾಗಿದ್ದಾರೆ. ಅವರು ಮಂತ್ರಿ ಆದರೆ ನಾನು ಕೂಡ ಮಂತ್ರಿಯಾದಂತೆ. ನಾನು ಕೇವಲ ರಾಜಕೀಯಕ್ಕಾಗಿ ಬಳ್ಳಾರಿಗೆ ಬಂದಿಲ್ಲ. ಬಳ್ಳಾರಿಯನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಬಂದಿದ್ದೇನೆ ಎಂದು ಹೇಳಿದರು.
ಬಳ್ಳಾರಿಯಲ್ಲಿ ಇನ್ನೊಂದೆರಡು ವರ್ಷದಲ್ಲಿ ಕ್ರಿಕೆಟ್ ವರ್ಲ್ಡ್‌ಕಪ್ ನಡೆಯುವ ಮಟ್ಟಕ್ಕೆ ಬಳ್ಳಾರಿಯನ್ನು ಅಭಿವೃದ್ಧಿ ಮಾಡುವೆ. ಈ ಹಿಂದೆ ನಾನು ಹೇಳಿದ ಕೆಲಸಗಳು ವೇಗವಾಗಿ ನಡೀತಿತ್ತು. ಈಗ ಆಗುತ್ತಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಹೀಗಾಗಿ ಚಿಂತೆ ಮಾಡಬೇಡ ಎಂದು ರಾಮುಲುಗೆ ತಿಳಿಸಿದ್ದೇನೆ ಎಂದು ತಿಳಿಸದರು.