ನಮ್ಮದು ಜೆಡಿಎಸ್, 2023 ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ : ಹೆಚ್ ಡಿ ರೇವಣ್ಣ HD Revanna saaksha tv
ಹಾಸನ : ನಮ್ಮದು ಜೆಡಿಎಸ್, 2023 ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೇವಣ್ಣ, ರಾಜ್ಯದಲ್ಲಿ ಬಿಸಿ ಟೀಂ ಇದೆ, ಬಿ ಅಂದರೆ ಬಿಜೆಪಿ, ಸಿ ಅಂದರೆ ಕಾಂಗ್ರೆಸ್. ನಮಗೆ ಬಿಸಿ ಟೀಂ ಬೇಡ, ಬಿಸಿ ಟೀಂನಿಂದ ಏನು ಸಿಕ್ಕಲ್ಲ.
ನಮ್ಮದು ಜೆಡಿಎಸ್, ಭತ್ತದ ತೆನೆ ಹೊತ್ತ ಮಹಿಳೆ ಗುರುತು. ಮಹಿಳೆ ಹೊಟ್ಟೆ ಹಸಿದವರಿಗೆ ಅನ್ನ ನೀಡುತ್ತಾಳೆ. ಬಡವರ ಕಷ್ಟಕ್ಕೆ ನೆರವಾಗುತ್ತಾಳೆ, ಭತ್ತದಿಂದ ಅನ್ನ, ರೈತರಿಗೆ ಅನ್ನ ನೀಡುತ್ತೇವೆ. ನಮ್ಮದು ಜೆಡಿಎಸ್, 2023 ಕ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತೆ ಎಂದರು.
ಇನ್ನು ಕಾಂಗ್ರೆಸ್ ನ ಹಿರಿಯ ಮುಖಂಡ ಗುಲಾಬ್ ನಬಿ ಅಜಾದ್ ಅಲ್ಪಸಂಖ್ಯಾತರ ಮಹಾನ್ ನಾಯಕ. ಕಾಂಗ್ರೆಸ್ ನ ಸ್ತಂಭ ಅದು, ಅಂತಹದ್ದನ್ನೇ ಬುಡಸಮೇತ ಕಿತ್ತು ಹಾಕಿದ್ದಾರೆ.
ಇಲ್ಲಿ ಒಬ್ಬ ಮುಖಂಡನನ್ನು ಇಟ್ಟುಕೊಂಡಿದ್ದಾರೆ. ಅವರಿಂದ ದೇವೇಗೌಡರನ್ನು, ಕುಮಾರಸ್ವಾಮಿ ಅವರನ್ನು ಬೈಯ್ಯಿಸುತ್ತಿದ್ದಾರೆ.
ದೇವೇಗೌಡರ ಕುಟುಂಬ ಬೈಯ್ಯದಿದ್ದರೆ ಅವರಿಗೆ ಊಟ ಸೇರಲ್ಲ. ಕಾಂಗ್ರೆಸ್ ನ ನಾವ್ಯಾರು ತೆಗೆಯಬೇಕಿಲ್ಲ. 26 ರಾಜ್ಯಗಳಲ್ಲಿ ಕಾಂಗ್ರೆಸ್ ಮನೆಗೆ ಕಳುಹಿಸಿದ್ದಾರೆ. 27 ನೇಯದು ಇಲ್ಲಿ ಮನೆಗೆ ಕಳುಹಿಸುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಎರಡು ರಾಷ್ಟ್ರೀಯ ಪಕ್ಷಗಳು ಬೆಳಿಗ್ಗೆ ಎದ್ದರೆ ಪ್ರಾದೇಶಿಕ ಪಕ್ಷದ ಅಭ್ಯರ್ಥಿಯನ್ನು ಕುಟುಂಬ ರಾಜಕಾರಣ ಎಂದು ಟೀಕಿಸುತ್ತಿವೆ. ಕಾಂಗ್ರೆಸ್ ನಲ್ಲಿ ಕುಟುಂಬ ರಾಜಕಾರಣ ಇಲ್ವಾ.
ಕಾಂಗ್ರೆಸ್ ನಲ್ಲಿ ಒಂದೇ ಕುಟುಂಬದ ನಾಲ್ಕು ಜನ ಎಂ.ಎಲ್.ಎ., ಎಂ.ಎಲ್.ಸಿ. ಬೇರೆ ಬೇರೆ ಹುದ್ದೆಗಳಲ್ಲಿ ಇದ್ದಾರೆ. ಕುಟುಂಬ ರಾಜಕಾರಣ ಎಂದು ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ.









