ರಾಯ್ಪುರ್: ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ನಕ್ಸಲ್ ರನ್ನು ಭದ್ರತಾ ಸಿಬ್ಬಂದಿ ಬಲೆ ಪಡೆದಿದ್ದಾರೆ ಎನ್ನಲಾಗಿದೆ.
ಕಾಟೇಕಲ್ಯಾಣ ಪೊಲೀಸ್ (Police) ಠಾಣಾ ವ್ಯಾಪ್ತಿಯ ದಬ್ಬಕುನ್ನ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿಯೇ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಅವರ ಶವಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎನ್ಕೌಂಟರ್ ನಡೆದ ಸ್ಥಳದಿಂದ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರ ಗುರುತು ಪತ್ತೆಯಾಗಿಲ್ಲ. ಹತ್ತಿರದ ಪ್ರದೇಶಗಳಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.ಇನ್ನೂ ಹಲವು ಮಾವೋವಾದಿಗಳು ಇರುವ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯೊಂದಿಗೆ ಸಂಪರ್ಕ ಸಾಧ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.