ವಿಶಾಖಪಟ್ಟಣಂ : ನೆರೆಯ ಆಂಧ್ರ ಪ್ರದೇಶದಲ್ಲಿ ದೇಶದ ಅತಿ ದೊಡ್ಡ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆ ತಲೆ ಎತ್ತಲಿದೆ. ವಿಶಾಖಪಟ್ಟಣಂ ನಗರದ ಸ್ವರಾಜ್ಯ ಮೈದಾನದಲ್ಲಿ ಈ ಪ್ರತಿಮೆ ನಿರ್ಮಾಣವಾಗಲಿದ್ದು, 125 ಅಡಿ ಎತ್ತರದ ಪ್ರತಿಮೆಯ ಶಿಲಾನ್ಯಾಸ ವನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ ರೆಡ್ಡಿ ಮಾಡಿದ್ದಾರೆ. ಸುಮಾರು 20 ಎಕರೆ ಪ್ರದೇಶದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪ್ರತಿಮೆ ಜೊತೆಗೆ ಸ್ಮಾರಕ ಭವನ ನಿರ್ಮಾಣ ಇರಲಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್ ರವರು ಈ ದೇಶದ ಶಕ್ತಿಯಾಗಿದ್ದಾರೆ. ಶಿಕ್ಷಣ, ಆರ್ಥಿಕ, ರಾಜಕೀಯ ಹಾಗೂ ಸಾಮಾಜಿಕ ನ್ಯಾಯ ನೀಡುವ ಕಾರ್ಯವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ರವರು ಮಾಡಿದ್ದು ಅವರಿಗೆ ಗೌವರ ನೀಡಿಲು ಈ ಸ್ಮಾರಕ ನಿರ್ಮಾಣ ಮಾಡಲಾಗುತ್ತಿದೆ ಎಂದಿದ್ದಾರೆ.