ದೊಡ್ಡಬಳ್ಳಾಪುರ ನಗರದಲ್ಲಿ ಸಿಕ್ಕ ಸಿಕ್ಕವರ ಮೇಲೆ ಬೀದಿ ನಾಯಿಗಳು ಅಟ್ಟಹಾಸ ಮೆರೆದಿರುವ ಘಟನೆ ನಡೆದಿದೆ.
ಬರೋಬ್ಬರಿ 14 ಜನರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿವೆ. ನಗರದ ಡಿ ಕ್ರಾಸ್, ಟಿಬಿ ಕ್ರಾಸ್, ತಾಲೂಕು ಕಚೇರಿ ರಸ್ತೆ, ಸೇರಿದಂತೆ ಹಲವು ಪ್ರದೇಶಗಳಲ್ಲಿ ನಾಯಿ ದಾಳಿ ನಡೆಸಿವೆ ಎನ್ನಲಾಗಿದೆ. ಸದ್ಯ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿಂಡು ಹಿಂಡಾಗಿ ಬರುತ್ತಿರುವ ಬೀದಿ ನಾಯಿಗಳು ರಸ್ತೆಯಲ್ಲಿ ಓಡಾಡುವ ಮಕ್ಕಳ ಮೇಲೆ ದಾಳಿ ನಡೆಸಿವೆ ಎನ್ನಲಾಗುತ್ತಿದೆ.
ಸದಂಗಡಿಗಳಿಂದ ತುಂಡುಗಳನ್ನು ಬೀದಿ ನಾಯಿಗಳಿಗೆ ಹಾಕುತ್ತಿರುವುದನ್ನು ತಿನ್ನುತ್ತಿರುವ ನಾಯಿಗಳು ಒಂಟಿಯಾಗಿ ಬರುತ್ತಿರುವ ಜನರ ಮೇಲೆ ದಾಳಿ ಮಾಡುತ್ತಿವೆ ಎನ್ನಲಾಗಿದೆ. ಹೀಗಾಗಿ ನಾಯಿಗಳನ್ನು ಸೆರೆ ಹಿಡಿಯಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.