ರಾಮನಗರ: ಚಿರತೆಯೊಂದು ಕಂಪೌಂಡ್ ಮೇಲೆ ಎಗರಿ ನಾಯಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ.
ಈ ಘಟನೆ ಕನಕಪುರ (Kanakapura) ತಾಲೂಕಿನ ಅಳ್ಳಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬೋರೇಗೌಡ ಎಂಬುವವರ ಮನೆಯ ಹತ್ತಿರ ಚಿರತೆ ಓಡಾಟ ನಡೆಸಿದ್ದು, ಸೋಮವಾರ ರಾತ್ರಿ ಮನೆಯ ಕಾಂಪೌಂಡ್ ಎಗರಿ ನಾಯಿ ಮೇಲೆ ದಾಳಿ ಮಾಡಿದೆ. ನಾಯಿ ಬೊಗಳುತ್ತಿದ್ದಂತೆ ಚಿರತೆ ಸ್ಥಳದಿಂದ ಓಡಿ ಹೋಗಿದೆ. ಚಿರತೆ ಓಡಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಚಿರತೆ ಕಾಣಿಸಿಕೊಂಡಿದ್ದಕ್ಕೆ ಜನರು ಬೆಚ್ಚಿ ಬಿದ್ದಿದ್ದು. ಕೂಡಲೇ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...








