ಹಾಸನ: ಮಾದಕ ವಸ್ತು ಮಾರಾಟ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿದ ಸ್ಥಳೀಯರು ನಂತರ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಈ ಘಟನೆ ಹಾಸನ ನಗರದ (Hassan) ಬಾಹರ್ ಪೇಟೆಯಲ್ಲಿ ನಡೆದಿದೆ. ಆರೋಪಿ ಫಜಲ್ ಹಾಗೂ ಆತನ ಸಹಚರರು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವೇಳೆ ಅದನ್ನು ಗಮನಿಸಿದ ಸ್ಥಳೀಯರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಆನಂತರ ನಾಲ್ವರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಲೆ ಪ್ರಮುಖ ಆರೋಪಿ ಫಜಲ್ ಪರಾರಿಯಾಗಿದ್ದಾನೆ. ಫಜಲ್ ಮಾದಕ ವಸ್ತುಗಳ ಮಾರಾಟ ಜಾಲದ ಕಿಂಗ್ಪಿನ್ ಎನ್ನಲಾಗಿದೆ. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.