ನಟಿ ಕಂಗನಾ ಮೇಲೆ ಡ್ರಗ್ಸ್ ಲಿಂಕ್ ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚಿಸಿದ ಮಹಾರಾಷ್ಟ್ರ ಸರ್ಕಾರ
ಮುಂಬೈ, ಸೆಪ್ಟೆಂಬರ್12: ನಟಿ ಕಂಗನಾ ರಣಾವತ್ ಅವರ ಕಚೇರಿಯನ್ನು ಭಾಗಶಃ ನೆಲಸಮಗೊಳಿಸಿದ ನಂತರ ಮಹಾರಾಷ್ಟ್ರ ಸರ್ಕಾರವು ಮುಂಬೈ ಪೊಲೀಸರಿಗೆ ಕಂಗನಾ ಮೇಲೆ ಡ್ರಗ್ಸ್ ಲಿಂಕ್ ಬಗ್ಗೆ ತನಿಖೆ ನಡೆಸುವಂತೆ ಕೇಳಿಕೊಂಡಿರುವುದಾಗಿ ವರದಿಗಳು ತಿಳಿಸಿವೆ.
ನಿಷೇಧಿತ ವಸ್ತುಗಳು ಮತ್ತು ಮಾದಕ ದ್ರವ್ಯಗಳನ್ನು ಕಂಗನಾ ರಣಾವತ್ ಬಳಸಿದ ಆರೋಪದ ಬಗ್ಗೆ ವಿಚಾರಿಸಲು ಮುಂಬೈ ಪೊಲೀಸರಿಗೆ ಈಗ ಮಹಾರಾಷ್ಟ್ರ ಸರ್ಕಾರದ ಅಧಿಕಾರಿಯೊಬ್ಬರ ಪತ್ರ ಬಂದಿರುವುದಾಗಿ ವರದಿಗಳು ತಿಳಿಸಿವೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ಅವರು 2016 ರಲ್ಲಿ ದಾಖಲಾದ ನಟ ಅಧ್ಯಾಯನ್ ಸುಮನ್ ಅವರ ಸಂದರ್ಶನಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಈ ವಿಷಯವನ್ನು ಎತ್ತಿದ್ದು, ಅಲ್ಲಿ ಅವರು ಕಂಗನಾ ಕೊಕೇನ್ ಸೇವಿಸಿದ್ದರು ಮತ್ತು ಅದನ್ನು ಸೇವಿಸುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಲು ಮುಂಬೈ ಪೊಲೀಸರಿಗೆ ಸೂಚಿಸಲಾಗಿದ್ದು, ಅವರು ಪತ್ರವನ್ನು ಪರಿಶೀಲಿಸುತ್ತಿದ್ದಾರೆ. ಇದರ ಬಗ್ಗೆ ಪೊಲೀಸರು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ವಿಶೇಷ ತನಿಖಾ ತಂಡ ಅಥವಾ ಮುಂಬೈ ಪೊಲೀಸರ ಮಾದಕವಸ್ತು ವಿರೋಧಿ ತಂಡ ತನಿಖೆ ನಡೆಸುತ್ತದೆಯೇ ಎಂಬ ಬಗ್ಗೆ ಮುಂಬೈ ಪೊಲೀಸರು ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ. ಈ ವಿಷಯದ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದರೆ, ಹೆಚ್ಚಿನ ತನಿಖೆಗಾಗಿ ಅಧ್ಯಾಯನ್ ಸುಮನ್ ಮತ್ತು ಕಂಗನಾ ರಣಾವತ್ ಅವರಿಗೆ ಸಮನ್ಸ್ ನೀಡಬಹುದು.
ನಟಿ ಕಂಗನಾ ರಣಾವತ್ ಡ್ರಗ್ಸ್ ತೆಗೆದುಕೊಂಡಿದ್ದಾರೆ ಎಂಬ ಅಧ್ಯಾಯನ್ ಸುಮನ್ ಅವರ ಆರೋಪವನ್ನು ಮುಂಬೈ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಅನಿಲ್ ದೇಶ್ ಮುಖ್ ಹೇಳಿದ್ದಾರೆ.
ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇಶಮುಖ್, ನಟ ಶೇಖರ್ ಸುಮನ್ ಅವರ ಪುತ್ರ ಅಧ್ಯಾಯನ್ ಮೊದಲು ರಣಾವತ್ ಜೊತೆ ಸಂಬಂಧ ಹೊಂದಿದ್ದರು ಮತ್ತು ಆಗ ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿಸಿದ್ದರು. ಈ ಬಗ್ಗೆ ಮುಂಬೈ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಗೃಹ ಸಚಿವರು ಹೇಳಿದ್ದಾರೆ.








