ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಶಕ್ಕೆ ಪಡೆದಿದೆ.
ಅತೀಖ್ ಅಹ್ಮದ್ ಬಂಧಿತ ಆರೋಪಿ. ಈ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೆ 21 ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ಪ್ರವೀಮ್ ನೆಟ್ಟಾರು ಹತ್ಯೆ ನಡೆದಿತ್ತು. ಇನ್ನೂ ಕೆಲವು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ. ಅವರ ತಲೆಗೆ ಇನಾಮು ಘೋಷಿಸಿದೆ.
ಬಂಧಿತ ಆರೋಪಿ, ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿ ಸಹಾಯ ಮಾಡಿದ್ದ ಎನ್ನಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ಮುಸ್ತಫಾ ಪರಾರಿಯಾಗಿದ್ದ. ಅತೀಖ್ ಆತ ಎಸ್ಕೇಪ್ ಆಗಲು ಅನುಕೂಲ ಮಾಡಿಕೊಟ್ಟಿದ್ದ. ಮೇ 2024 ರಲ್ಲಿ ಮುಸ್ತಫಾ ಬಂಧನವಾಗುವವರೆಗೂ ಕಾನೂನು ಜಾರಿ ಸಂಸ್ಥೆಗಳಿಂದ ತಪ್ಪಿಸಿಕೊಳ್ಳಲು ಅತೀಕ್ ಸಹಾಯ ಮಾಡಿದ್ದ ಎಂಬುವುದನ್ನು ಎನ್ ಐಎ ಮೂಲ ತಿಳಿಸಿದೆ.








